ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಪಾಲರೊಡನೆ ಸಿಎಂ ದಿಢೀರ್ ಭೇಟಿ

Last Updated 24 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರ ಕರೆ ಮೇರೆಗೆ ಶನಿವಾರ ಸಂಜೆ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ರಾಜಭವನಕ್ಕೆ ದಿಢೀರ್ ಭೇಟಿ ನೀಡಿ ಚರ್ಚಿಸಿದರು. ಅಕ್ರಮ ಗಣಿಗಾರಿಕೆ ಕುರಿತ ಲೋಕಾಯುಕ್ತ ವರದಿಯ ಅನುಷ್ಠಾನ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ರಾಜ್ಯಪಾಲರು ಮಾಹಿತಿ ಪಡೆದರು.

ಕೇಂದ್ರ ಉನ್ನತಾಧಿಕಾರ ಸಮಿತಿಯ ಸಲಹೆ ಮೇರೆಗೆ ಸುಪ್ರೀಂಕೋರ್ಟ್ ಕೆಲ ಕಂಪೆನಿಗಳ ಗಣಿ ವ್ಯವಹಾರವನ್ನು ಸಿಬಿಐ ತನಿಖೆಗೆ ಆದೇಶಿಸಿದೆ. ಈ ಕುರಿತು ಯಾವ ಕ್ರಮ ತೆಗೆದುಕೊಳ್ಳುತ್ತೀರಿ ಎಂಬುದರ ಬಗ್ಗೆಯೂ ಮುಖ್ಯಮಂತ್ರಿಯಿಂದ ಮಾಹಿತಿ ಪಡೆದರು ಎಂದು ಗೊತ್ತಾಗಿದೆ.

ಅರಣ್ಯ ಸಚಿವ ಸಿ.ಪಿ.ಯೋಗೀಶ್ವರ್ ವಿರುದ್ಧ ವಂಚನೆ ಆರೋಪ ಇದ್ದು, ಆ ಕುರಿತೂ ಮಾಹಿತಿ ಕೋರಿದರು ಎನ್ನಲಾಗಿದೆ. ತಮ್ಮ ಪ್ರಧಾನ ಕಾರ್ಯದರ್ಶಿ ಐ.ಎಸ್.ಎನ್ ಪ್ರಸಾದ್ ಜತೆ ರಾಜಭವನ ಪ್ರವೇಶಿಸಿದ ಮುಖ್ಯಮಂತ್ರಿ ಅರ್ಧ ಗಂಟೆ ಕಾಲ ಅಲ್ಲೇ ಇದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT