ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸರ್ಕಾರಿ ನೌಕರರ ಪ್ರತಿಭಟನೆ

Last Updated 10 ಫೆಬ್ರುವರಿ 2011, 9:00 IST
ಅಕ್ಷರ ಗಾತ್ರ

ಮಾಲೂರು:  ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ 6ನೇ ವೇತನ ಆಯೋಗ ಸೌಲಭ್ಯಗಳನ್ನು ನೀಡಬೇಕೆಂದು ಒತ್ತಾಯಿಸಿ ಸರ್ಕಾರಿ ನೌಕರರ ತಾಲ್ಲೂಕು ಸಂಘದ ವತಿಯಿಂದ ಪಟ್ಟಣದ ತಾಲ್ಲೂಕು ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.ಕೇಂದ್ರ ಸರ್ಕಾರ ತನ್ನ ನೌಕರರಿಗೆ ಪ್ರತಿ 10 ವರ್ಷಗಳಿಗೊಮ್ಮೆ ವೇತನ ಪರಿಷ್ಕರಿಸುತ್ತದೆ.

1998ರಲ್ಲಿ 5ನೇ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಿದ ನಂತರ, 6ನೇ ಆಯೋಗ ರಚಿಸುವ ಪೂರ್ವದಲ್ಲಿ ನೌಕರರಿಗೆ ಶೇ. 50 ತುಟ್ಟಿಭತ್ಯೆಯನ್ನು ಮೂಲ ವೇತನದಲ್ಲಿ ವಿಲೀನಗೊಳಿಸಿ ಭತ್ಯೆಗಳನ್ನು ಪರಿಷ್ಕರಿಸಿತ್ತು. ಬಹುತೇಕ ರಾಜ್ಯ ಸರ್ಕಾರಗಳು ಕೇಂದ್ರದ ಮಾದರಿಯಲ್ಲಿ ವೇತನ ಪರಿಷ್ಕರಿಸಿವೆ. ಕೇಂದ್ರ ಸರ್ಕಾರಿ ನೌಕರರಿಗೆ ಹೋಲಿಸಿದರೆ ಸುಮಾರು ಶೇ. 30-40 ವೇತನ ವ್ಯತ್ಯಾಸ ಹೊಂದಿರುತ್ತದೆ.

ಕೇಂದ್ರ ಸರ್ಕಾರಿ ನೌಕರರ ಮಾದರಿಯಲ್ಲಿಯೇ ವೇತನ ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿ ತಹಶೀಲ್ದಾರ್ ಜಿ.ವಿ.ನಾಗರಾಜ್ ಅವರಿಗೆ ಮನವಿ ಸಲ್ಲಿಸಿದರು ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಜಯರಾಂ, ಗೌರವಾಧ್ಯಕ್ಷ ಎಂ.ಆಂಜಿನಪ್ಪ, ಉಪಾಧ್ಯಕ್ಷ ವಿ.ಸುಬ್ರಮಣಿ, ಖಜಾಂಚಿ ಎಂ.ಬಾಲಾಜಿಸಿಂಗ್, ಕಾರ್ಯದರ್ಶಿ ಡಾ.ವಿ.ನಾರಾಯಣಸ್ವಾಮಿ, ಮುನಿರಾಜ, ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಮುನಿನಾರಾಯಣ್, ಕಾರ್ಯದರ್ಶಿ ನರಸಿಂಹ, ಜಿಲ್ಲಾ ಸಹಕಾರ್ಯದರ್ಶಿ ಎಸ್.ಎನ್. ಮುನಿರಾಜು, ಎಸ್.ಸಿ ಕೋದಂಡರಾಮಯ್ಯ, ಗ್ರಾಮ ಲೆಕ್ಕಾಧಿಕಾರಗಳ ಸಂಘದ ಅಧ್ಯಕ್ಷ ಎಂ.ಬೈರಪ್ಪ ಮುಂತಾದವರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT