ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯೋತ್ಸವ, ಕನಕ ಜಯಂತಿ ಸಿದ್ಧತಾ ಸಭೆ

Last Updated 29 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ದೇವನಹಳ್ಳಿ: `ನವೆಂಬರ್ ಒಂದರಂದು ತಾಲ್ಲೂಕಿನ ಮಿನಿ ವಿಧಾನ ಸೌಧದ ಆವರಣದಲ್ಲಿ ನಡೆಯುವ ಕರ್ನಾಟಕ ರಾಜ್ಯೋತ್ಸವ ಹಾಗೂ ಕನಕ ಜಯಂತಿ ಕಾರ್ಯಕ್ರಮಕ್ಕೆ ಎಲ್ಲಾ ಅಧಿಕಾರಿ ವರ್ಗದವರು ಹಾಜರಾಗಬೇಕು. ತಪ್ಪಿದರೆ ಶಿಸ್ತಿನ ಕ್ರಮ ಕೈಗೊಳ್ಳಬೇಕಾಗುತ್ತದೆ~ ಎಂದು ತಹಶೀಲ್ದಾರ್ ಎಲ್.ಸಿ ನಾಗರಾಜ್ ಎಚ್ಚರಿಸಿದ್ದಾರೆ.

ದೇವನಹಳ್ಳಿ ಮಿನಿವಿಧಾನಸೌಧ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.

`ರಾಜ್ಯೋತ್ಸವ ಹಾಗೂ ಕನಕ ಜಯಂತಿ ಕಾರ್ಯಕ್ರಮವು ಒಂದೇ ವೇದಿಕೆಯಲ್ಲಿ ನವೆಂಬರ್ 14ರಂದು ಆಚರಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದ್ದ, ಜನಪದ ಕಲಾ ತಂಡಗಳು ಪ್ರದರ್ಶನ ನೀಡಲಿವೆ. ಕನಕ ಮಹರ್ಷಿಯ ಭಾವಚಿತ್ರವುಳ್ಳ ರಥವು ನಗರದ ಬೀದಿಗಳಲ್ಲಿ ಸಂಚರಿಸಲಿದೆ. ಸಾಮಾಜ ಸೇವೆ ಸಲ್ಲಿಸಿದ ಗಣ್ಯರಿಗೆ ಕಾರ್ಯಕ್ರಮದಲ್ಲಿ ಅಭಿನಂದಿಸಲು ತೀರ್ಮಾನಿಸಲಾಗಿದೆ.

ಜಿ.ಪಂ ಸದಸ್ಯ ಬಿ.ಎಂ.ಬೀರಪ್ಪ, ವಿಜಯಪುರ ಪುರಸಭೆ ಉಪಾಧ್ಯಕ್ಷ ಎಂ.ಎಲ್, ಕೃಷ್ಣಪ್ಪ, ಪುರಸಭೆ ಸದಸ್ಯ ಜಿ.ಎ.ರವೀಂದ್ರ, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ, ಹಾಗೂ ಕುರುಬ ಸಮುದಾಯದ ಮುಖಂಡರು ಸಭೆಯಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT