ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರೀಯ ಮತದಾರರ ದಿನಾಚರಣೆಗೆ ಸಿದ್ಧತೆ

Last Updated 7 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಚುನಾವಣಾ ಆಯೋಗದ ಸ್ಥಾಪನಾ ದಿನವನ್ನು `ರಾಷ್ಟ್ರೀಯ ಮತದಾರರ ದಿನ~ವನ್ನಾಗಿ ಆಚರಿಸುತ್ತಿದ್ದು, ಇದಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ರಾಜ್ಯದ ಉಸ್ತುವಾರಿ ಮುಖ್ಯ ಚುನಾವಣಾಧಿಕಾರಿ ಆರ್. ಮನೋಜ್ ತಿಳಿಸಿದರು.

`ಮತದಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ಜನವರಿ 25ರಂದು ರಾಷ್ಟ್ರೀಯ ಮತದಾರರ ದಿನ ಆಚರಿಸುತ್ತಿದ್ದು, ರಾಜ್ಯದ ಎಲ್ಲ 46,050 ಮತಗಟ್ಟೆಗಳಲ್ಲಿ ಈ ಕಾರ್ಯಕ್ರಮ ನಡೆಯಲಿದೆ~ ಎಂದು ಅವರು `ಪ್ರಜಾವಾಣಿ~ಗೆ ತಿಳಿಸಿದರು.

ರಾಜ್ಯ ಮಟ್ಟದ ಕಾರ್ಯಕ್ರಮವನ್ನು ನಗರದಲ್ಲಿ ಆಯೋಜಿಸುತ್ತಿದ್ದು, ಇದಕ್ಕೆ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗುವುದು ಎಂದು ಹೇಳಿದರು.

ಈ ಕಾರ್ಯಕ್ರಮದ ಹಿನ್ನೆಲೆಯಲ್ಲಿ ತಾಲ್ಲೂಕು, ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ ಕ್ರೀಡಾ ಸ್ಪರ್ಧೆಗಳನ್ನೂ ಆಯೋಜಿಸಲಾಗಿದೆ. ಪಿಯುಸಿ ಒಳಗಿನ ಮತ್ತು ಪಿಯುಸಿ ನಂತರದ ಯುವಕರಿಗೆ ವಾಲಿಬಾಲ್, ಕೊಕ್ಕೊ, ಕಬಡ್ಡಿ ಹಾಗೂ ಮಹಿಳೆಯರಿಗೆ ರಂಗೋಲಿ ಸ್ಪರ್ಧೆಗಳನ್ನು ನಡೆಸಲಾಗುವುದು. ಇವುಗಳಲ್ಲಿ ಗೆಲ್ಲುವವರಿಗೆ ಬಹುಮಾನ ನೀಡಲಾಗುವುದು ಎಂದರು.

ಹೊಸದಾಗಿ ಹೆಸರು ನೋಂದಾಯಿಸಿಕೊಂಡ ಯುವ ಮತದಾರರಿಗೆ ಬಹುಮಾನ ನೀಡುವ ಕಾರ್ಯಕ್ರಮವೂ ಇದೆ. ವಿಧಾನಸಭಾ ಕ್ಷೇತ್ರವಾರು ಹೆಸರು ನೋದಾಯಿಸಿಕೊಂಡಿರುವವರ ಪಟ್ಟಿಯನ್ನು ಸಿದ್ಧಪಡಿಸಿ, ಲಾಟರಿ ಮೂಲಕ ಒಬ್ಬರನ್ನು ಬಹುಮಾನಕ್ಕೆ ಆಯ್ಕೆ ಮಾಡಲಾಗುತ್ತದೆ.

ಮತದಾರರ ಪಟ್ಟಿ ಪರಿಷ್ಕರಣೆ ಪೂರ್ಣಗೊಂಡಿದ್ದು, ಈ ವರ್ಷ ಸುಮಾರು 6.27 ಲಕ್ಷ ಮಂದಿ ಹೊಸದಾಗಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಮತದಾರರ ಒಟ್ಟು ಸಂಖ್ಯೆ 4.13 ಕೋಟಿ ಇದೆ. ಇದರಲ್ಲಿ ಪುರುಷರು 2.11 ಕೋಟಿ ಮತ್ತು ಮಹಿಳೆಯರು 2.02 ಕೋಟಿ ಇದ್ದಾರೆ ಎಂದು ಮನೋಜ್ ವಿವರಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT