ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರೀಯ ಲಾಂಛನ ಭಗ್ನ: ಸಂಘಟನೆಗಳ ಖಂಡನೆ

Last Updated 2 ಜನವರಿ 2012, 8:10 IST
ಅಕ್ಷರ ಗಾತ್ರ

ಬ್ಯಾಡಗಿ: ಪಟ್ಟಣದ ಸುಭಾಸ್ ಸರ್ಕಲ್‌ನಲ್ಲಿ ನಿರ್ಮಿಸಲಾಗಿರುವ ರಾಷ್ಟ್ರೀಯ ಲಾಂಛನವನ್ನು ದುಷ್ಕರ್ಮಿಗಳು ಭಗ್ನಗೊಳಿಸಿರುವುದನ್ನು ವಿವಿಧ ಸಂಘಟನೆಗಳು ಖಂಡಿಸಿವೆ.

ಆರು ದಶಕಗಳ ಹಿಂದೆ ಸ್ಥಾಪಿಸಲಾಗಿದ್ದ ನಾಲ್ಕು ಮುಖವುಳ್ಳ ಸಿಂಹದ ಲಾಂಛನದ ದಕ್ಷಿಣ ಭಾಗದ ಮುಖವನ್ನು ಭಾಗಶಃ ಒಡೆದು ಹಾಕಲಾಗಿದ್ದು, ರಾಷ್ಟ್ರೀಯ ಲಾಂಛನಕ್ಕೆ ಅವಮಾನವೆಸಗಲಾಗಿದೆ. ಈ ಕೃತ್ಯಕ್ಕೆ ಕಾರಣರಾಗಿರುವ ದುಷ್ಕರ್ಮಿಗಳನ್ನು ಗುರುತಿಸಿ ಅವರನ್ನು ಕೂಡಲೆ ಬಂಧಿಸುವಂತೆ ಸ್ಥಳೀಯ ವಿವಿಧ ಸಂಘಟನೆಗಳು ಒತ್ತಾಯಿಸಿವೆ.

ರಾಷ್ಟ್ರೀಯ ಲಾಂಛನ ಭಗ್ನಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುರಸಭೆಯ ನಿರ್ಲಕ್ಷ್ಯವೇ ಕಾರಣವೆಂದು ಸಾಮಾಜಿಕ ಕಾರ್ಯಕರ್ತ ಮನೋಹರ ಅರ್ಕಾಚಾರಿ ಆರೋಪಿಸಿದ್ದಾರೆ. ಸ್ವಾತಂತ್ರ್ಯ ಯೋಧ ಎಸ್.ಆರ್. ಮಾಹಾರಾಜಪೇಟ, ರಾಜಕುಮಾರ ಅಭಿಮಾನಿಗಳ ಸಂಘದ ಅಧ್ಯಕ್ಷ ಮಂಜುನಾಥ ಶಿರವಾಡಕರ, ಎಸ್‌ಎಫ್‌ಐ ಸಂಚಾಲಕ ಮಂಜುನಾಥ ಪೂಜಾರ, ಮುಖ್ಯರಸ್ತೆ ಅಗಲೀಕರಣ ಸಮಿತಿ ಅಧ್ಯಕ್ಷ ಸುರೇಶ ಛಲವಾದಿ, ಉಪಾಧ್ಯಕ್ಷ  ಭರತ ಚೂರಿ, ಕಾರ‌್ಯದರ್ಶಿ ಎಂ.ಬಿ. ಹಲಗೇರಿ, ರಾಷ್ಟ್ರೀಯ ಲಾಂಛನವನ್ನು ಕಿರಿದಾದ ಜಾಗದಲ್ಲಿ ನಿರ್ಮಿಸಲಾಗಿದ್ದು ಅದನ್ನು ಕೂಡಲೆ ಸ್ಥಳಾಂತರಗೊಳಿಸಿ ಭಗ್ನಗೊಳಿಸಿದ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ  ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT