ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಹುಲ್ ಗಾಂಧಿ 26ರಂದು ಹಾವೇರಿಗೆ

ಲೋಕಸಭಾ ವ್ಯಾಪ್ತಿಯ ಬಹಿರಂಗ ಸಭೆ
Last Updated 24 ಏಪ್ರಿಲ್ 2013, 6:58 IST
ಅಕ್ಷರ ಗಾತ್ರ

ಹಾವೇರಿ: ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚನೆಗಾಗಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ರಾಹುಲ್ ಗಾಂಧಿ ಇದೇ 26ರಂದು ನಗರಕ್ಕೆ ಆಗಮಿಸಲಿದ್ದಾರೆ ಎಂದು ಹಾವೇರಿ ಲೋಕಸಭಾ ಕ್ಷೇತ್ರದ ಎಐಸಿಸಿ ವೀಕ್ಷಕ ಗಿಡುಗು ರುದ್ರರಾಜು ತಿಳಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ ಇಲ್ಲಿನ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ನಡೆಯುವ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಜಿಲ್ಲೆಯ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಹೇಳಿದರು.

ಅಂದು ರಾಹುಲ್ ಗಾಂಧಿ ಕೋಲಾರ, ತುಮಕೂರು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕೊನೆಯ ಕಾರ್ಯಕ್ರಮವಾಗಿ ಹಾವೇರಿಗೆ ಆಗಮಿಸುವ ಅವರು, ಇದೇ ಸಂದರ್ಭದಲ್ಲಿ ರಾಹುಲ್‌ಗಾಂಧಿ ಹಾವೇರಿ ಹಾಗೂ ಗದಗ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿಗಳನ್ನು ವೇದಿಕೆ ಮೂಲಕ ಜನರಿಗೆ ಪರಿಚಯಿಸಲಿದ್ದಾರೆ ಎಂದು ತಿಳಿಸಿದರು.

ರಾಹುಲ್ ಅವರೊಂದಿಗೆ ರಾಜ್ಯದ ಉಸ್ತುವಾರಿಗಳಾದ ಮಧುಸೂದನ ಮೇಸ್ತ್ರಿ, ಪಕ್ಷದ ರಾಷ್ಟ್ರೀಯ ನಾಯಕ ವಿ. ಹನುಮಂತರಾವ್, ಕೇಂದ್ರ ರೇಲ್ವೆ ಸಚಿವ ಸೂರ್ಯಪ್ರಕಾಶ ರೆಡ್ಡಿ, ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಪರಮೇಶ್ವರ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಇನ್ನಿತರ ನಾಯಕರು ಆಗಮಿಸಲಿದ್ದಾರೆ ಎಂದರು.

ಜಿಲ್ಲೆಯಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿ ಪ್ರವಾಸ ಮಾಡಿದ್ದು, ಎಲ್ಲ ಕ್ಷೇತ್ರಗಳಲ್ಲಿ ಜನರು ಕಾಂಗ್ರೆಸ್‌ನತ್ತ ಒಲವು ತೋರುತ್ತಿದ್ದಾರೆ. ಈಗಾಗಲೇ ಟಿಕೆಟ್ ಆಕಾಂಕ್ಷಿಗಳಾಗಿದ ಅಭ್ಯರ್ಥಿಗಳು ಟಿಕೆಟ್ ಸಿಗದೇ ಬೇಸರಗೊಂಡಿದ್ದರು. ಅವರ ಜತೆಯಲ್ಲಿ ಮಾತನಾಡಿ ಅವರನ್ನು ಸಮಾಧಾನ ಮಾಡಲಾಗಿದೆ.

ಅಲ್ಲದೇ ಪಕ್ಷದ ಅಧಿಕೃತ ಅಭ್ಯರ್ಥಿಗಳ ಪರ ಪ್ರಚಾರ ಮಾಡಲಿದ್ದಾರೆ ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್‌ನ ಜಿಲ್ಲಾ ವಕ್ತಾರ ರಮೇಶ ಕಡಕೋಳ, ಬಸವರಾಜ ಹೆಡಿಗ್ಗೊಂಡ, ಸೇರಿದಂತೆ ಇನ್ನಿತರ ಮುಖಂಡರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT