ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಹುಲ್‌ ಗಾಂಧಿಯೇ ಪ್ರಧಾನಿ ಅಭ್ಯರ್ಥಿ: ಸಚಿವ ಬೇನಿ ಸ್ಪಷ್ಟನೆ

Last Updated 12 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರೇ ಪಕ್ಷದ ಪ್ರಧಾನಿ ಅಭ್ಯರ್ಥಿ ಆಗಲಿದ್ದಾರೆ ಎಂದು ಕೇಂದ್ರ ಸಚಿವ ಬೇನಿ ಪ್ರಸಾದ್ ವರ್ಮ ಗುರುವಾರ ಹೇಳಿದ್ದಾರೆ.

ಮುಂಬರುವ ಲೋಕಸಭಾ ಚುನಾ­ವಣೆ­­ಯಲ್ಲಿ ಕಾಂಗ್ರೆಸ್‌ನ ಪ್ರಧಾನಿ ಅಭ್ಯರ್ಥಿ­ಯಾಗಿ ನಂದನ್ ನಿಲೇಕಣಿ ಅವರು ಸ್ಪರ್ಧಿಸಲಿದ್ದಾರೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ನಮ್ಮ ಪ್ರಧಾನಿ ಆಗುವವರು ರಾಹುಲ್‌ ಗಾಂಧಿಯೇ ಹೊರತು ಬೇರೆ ಯಾರೂ ಅಲ್ಲ. ರಾಹುಲ್‌ ಅವರೇ ಪ್ರಧಾನಿ ಅಭ್ಯರ್ಥಿ’ ಎಂದು ಸ್ಪಷ್ಟ­ಪಡಿಸಿದರು.

ನಂದನ್‌  ನಿಲೇಕಣಿ ಅವರು ಕಾಂಗ್ರೆಸ್‌ ಪ್ರಧಾನಿ ಅಭ್ಯರ್ಥಿ­ಯಾಗ­ಲಿದ್ದಾರೆ ಎಂಬ ಊಹಾಪೋಹ­ಗಳನ್ನು ಬುಧವಾರವೇ ಕಾಂಗ್ರೆಸ್ ನಿರಾಕರಿಸಿತ್ತು.
ಕಾಂಗ್ರೆಸ್‌ನ ಪ್ರಧಾನಿ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ ಅವರು ಆಯ್ಕೆಯಾಗ­ಲಿದ್ದಾರೆಯೇ ಎಂಬ ಕುರಿತು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಈಚೆಗಷ್ಟೇ ಸುಳಿವು ನೀಡಿದ್ದರು ಎಂದು ಮೂಲಗಳು ತಿಳಿಸಿವೆ.

ನಿಲೇಕಣಿ ಅವರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿ,  ಲೋಕಸಭಾ ಚುನಾ­ವಣೆಯಲ್ಲಿ ಕರ್ನಾ­ಟಕದ ದಕ್ಷಿಣ ಬೆಂಗಳೂರು ಸ್ಥಾನದಿಂದ ಸ್ಪರ್ಧಿಸುವರು ಎಂದು ಈ ಹಿಂದೆ ವರದಿಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT