ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೂಪಾಯಿ ಮೌಲ್ಯ, ಸೂಚ್ಯಂಕದಲ್ಲಿ ಏರಿಕೆ

Last Updated 16 ಮೇ 2014, 4:56 IST
ಅಕ್ಷರ ಗಾತ್ರ

ನವದೆಹಲಿ: ಎನ್‌ಡಿಎ ಮೈತ್ರಿಕೂಟ ಮುನ್ನಡೆ ಸಾಧಿಸುತ್ತಿರುವಂತೆಯೇ ಡಾಲರ್‌ ಎದುರು ರೂಪಾಯಿ ಮೌಲ್ಯದಲ್ಲಿ 41 ಪೈಸೆಯಷ್ಟು ಏರಿಕೆ ಕಂಡಿದೆ. ಜೊತೆಗೇ ಸೆನ್ಸೆಕ್ಸ್‌ ಸೂಚ್ಯಂಕದಲ್ಲಿ 1000 ಪಾಯಿಂಟ್‌ಗಳ ಏರಿಕೆಯಾಗಿದೆ.

ಕಳೆದ ಹತ್ತು ತಿಂಗಳಲ್ಲಿ ಡಾಲರ್‌ ಎದುರು ರೂಪಾಯಿ ಮೌಲ್ಯದಲ್ಲಿ ಏರಿಕೆಯಾಗಿರುವುದು ಇದೇ ಮೊದಲ ಸಲ. ಇದರಿಂದ ಪ್ರತಿ ಡಾಲರ್‌ಗೆ ರೂಪಾಯಿ ಬೆಲೆ ₨ 58.88ಕ್ಕೆ ಏರಿದಂತಾಗಿದೆ.

ಅದೇ ರೀತಿ ಷೇರುಪೇಟೆಯಲ್ಲಿನ ಸೂಚ್ಯಂಕದಲ್ಲಿಯೂ ಭಾರೀ ಏರಿಕೆಯಾಗಿದೆ. ಎನ್‌ಡಿಎ ಮೈತ್ರಿಕೂಟ ಸ್ಪಷ್ಟ ಬಹುಮತ ಗಳಿಸಲಿದೆ ಎಂಬ ಸಮೀಕ್ಷೆಗಳ ವರದಿಯು ಷೇರು ಪೇಟೆಯಲ್ಲಿ ಸಂಚಲನ ಮೂಡಿಸಿತ್ತು. ಮೊದಲ ಸುತ್ತಿನ ಎಣಿಕೆ ಮುಗಿಯುವುದರೊಳಗೇ ಸೂಚ್ಯಂಕದಲ್ಲಿ ಏರಿಕೆ ಕಂಡುಬಂದಿದೆ. ಮಧ್ಯಾಹ್ನದ ವೇಳೆಗೆ ಷೇರುಪೇಟೆಯ ಸೂಚ್ಯಂಕದಲ್ಲಿ ಮತ್ತಷ್ಟು ಬದಲಾವಣೆಗಳಾಗುವ ನಿರೀಕ್ಷೆಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT