ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೇವಣಸಿದ್ದಯ್ಯ ಕಾಂಗ್ರೆಸ್‌ಗೆ

Last Updated 14 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಮೈಸೂರು: ಬಿಜೆಪಿಯ ಎಲ್.ರೇವಣಸಿದ್ದಯ್ಯ, ಚಲನಚಿತ್ರ ನಿರ್ದೇಶಕ ರಾಜೇಂದ್ರಸಿಂಗ್ ಬಾಬು, ಎನ್.ಆರ್.ನಂಜುಂಡೇಗೌಡ ಭಾನುವಾರ ಕಾಂಗ್ರೆಸ್  ಪಕ್ಷಕ್ಕೆ ಸೇರ್ಪಡೆಯಾದರು.

ಇವರನ್ನು ನಗರದಲ್ಲಿ ಏರ್ಪಡಿಸಿದ್ದ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ಕಾರ್ಯಕರ್ತರ ಸಮಾವೇಶದಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ  ಸಿದ್ದರಾಮಯ್ಯ ಪಕ್ಷಕ್ಕೆ ಬರಮಾಡಿಕೊಂಡರು.

ನಿವೃತ್ತ ಐಜಿಪಿಯಾದ ರೇವಣಸಿದ್ದಯ್ಯ ಅವರನ್ನು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಕಾಂಗ್ರೆಸ್‌ಗೆ ಕರೆತಂದಿದ್ದರು. 2004 ನೇ ಸಾಲಿನಲ್ಲಿ  ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇವರು ಸ್ಪರ್ಧಿಸಿ, 58,382 ಮತಗಳನ್ನು ಪಡೆದಿದ್ದರು. ಇದೇ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಿದ್ದರಾಮಯ್ಯ 90,727 ಮತಗಳನ್ನು ಪಡೆದಿದ್ದರು.

ಬದಲಾದ ರಾಜಕೀಯ ಸನ್ನಿವೇಶದಲ್ಲಿ ರೇವಣಸಿದ್ದಯ್ಯ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. 2008 ರಲ್ಲಿ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ  ಬಿಜೆಪಿಯಿಂದ ಸ್ಪರ್ಧಿಸಿದ್ದ ರೇವಣಸಿದ್ದಯ್ಯ 53,060 ಮತಗಳನ್ನು ಪಡೆದಿದ್ದರು. ಇವರನ್ನು ಕಾಂಗ್ರೆಸ್‌ನ ಸ್ದ್ದಿದರಾಮಯ್ಯ 18,848 ಮತಗಳ ಅಂತರದಿಂದ  ಪರಾಭವಗೊಳಿಸಿದ್ದರು. ಈಗ ಬಿಜೆಪಿ ತೊರೆದಿರುವ ರೇವಣಸಿದ್ದಯ್ಯ ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಸ್ದ್ದಿದು ಜೊತೆ ಕೈ ಜೋಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT