ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೇವಣ್ಣಗೆ ಟಿಕೆಟ್ ನೀಡಿ: ಕಾಗಿನೆಲೆ ಸ್ವಾಮೀಜಿ ಆಗ್ರಹ

Last Updated 9 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಮಾಜಿ ಸಚಿವ ಎಚ್.ಎಂ. ರೇವಣ್ಣ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕು' ಎಂದು  ಕಾಗಿನೆಲೆ ಮಹಾ ಸಂಸ್ಥಾನದ ಈಶ್ವರಾನಂದಪುರಿ ಸ್ವಾಮೀಜಿ ಆಗ್ರಹಿಸಿದರು.

ಕರ್ನಾಟಕ ಪ್ರದೇಶ ಕುರುಬರ ಸಂಘ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, `ರೇವಣ್ಣ ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲೇ ಇದ್ದಾರೆ. ಹೀಗಾಗಿ ಹೆಬ್ಬಾಳದಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಬೇಕು' ಎಂದರು.

ನಗರದ 28 ವಿಧಾನಸಭಾ ಕ್ಷೇತ್ರಗಳ ಪೈಕಿ ಕನಿಷ್ಠ 4 ಕ್ಷೇತ್ರಗಳಲ್ಲಿ ಕುರುಬ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಹೈದರಾಬಾದ್ ಕರ್ನಾಟಕದಲ್ಲಿ ಒಬ್ಬರಿಗೂ ಸ್ಪರ್ಧಿಸಲು ಅವಕಾಶ ನೀಡದೆ ಇರುವುದು ಖಂಡನೀಯ. ಮುಂಬೈ ಕರ್ನಾಟಕದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಸ್ಪರ್ಧಿಸಲು ಎಲ್ಲಾ ರಾಜಕೀಯ ಪಕ್ಷಗಳು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT