ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೇಷ್ಮೆ ಆಮದಿಗೆ ವಿರೋಧಿಸಿ ಪ್ರತಿಭಟನೆ

Last Updated 19 ಫೆಬ್ರುವರಿ 2011, 9:20 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಸುಂಕ ರಹಿತ ರೇಷ್ಮೆ ಆಮದು ಮಾಡಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೈಗೊಂಡಿರುವ ನಿರ್ಣಯ ಹಿಂಪಡೆಯುವಂತೆ ಆಗ್ರಹಿಸಿ ಬೆಂಗಳೂರು ಕೇಂದ್ರೀಯ ರೇಷ್ಮೆ ಮಂಡಳಿ ಎದುರು ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರಮಟ್ಟದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಿಲ್ಲೆಯ ರೇಷ್ಮೆ ಕೃಷಿಕರು ಪ್ರಯಾಣ ಬೆಳೆಸಿದರು. ಕರ್ನಾಟಕ ಪ್ರಾಂತ ರೈತ ಸಂಘ, ರೇಷ್ಮೆ ಕೃಷಿ ಹಿತರಕ್ಷಣಾ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳು ಆಯೋಜಿಸಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತಾಲ್ಲೂಕಿನ ಯಲುವಹಳ್ಳಿ, ದೇವಶೆಟ್ಟಹಳ್ಳಿ, ನಾಯನಹಳ್ಳಿ ಮುಂತಾದ ಗ್ರಾಮಗಳು ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಸುಮಾರು ಒಂದು ಸಾವಿರಕ್ಕೂ ಹೆಚ್ಚು ರೇಷ್ಮೆ ಕೃಷಿಕರು ಪ್ರಯಾಣ ಬೆಳೆಸಿದರು.

ಸುಂಕ ರಹಿತ ರೇಷ್ಮೆ ಆಮದಿನಿಂದ ದೇಶದ ರೇಷ್ಮೆ ಕೃಷಿಕರಿಗೆ ಭಾರಿ ನಷ್ಟವಾಗಲಿದೆ. ದೇಶದಲ್ಲೇ ಸಾಕಷ್ಟು ಪ್ರಮಾಣದಲ್ಲಿ ರೇಷ್ಮೆ ಉತ್ಪನ್ನ ಮಾಡಲು ಅವಕಾಶವಿದ್ದರೂ ಅನಗತ್ಯವಾಗಿ ಸುಂಕ ರಹಿತ ರೇಷ್ಮೆ ಆಮದು ಮಾಡಿಕೊಳ್ಳುತ್ತಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ತನ್ನ ನಿರ್ಣಯವನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಡ ಹೇರುವ ಉದ್ದೇಶದಿಂದ ಪ್ರತಿಭಟನೆ ನಡೆಸಲಾಗುತ್ತಿದೆ.

ನಿರ್ಣಯವನ್ನು ಹಿಂಪಡೆಯದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪದ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿ ಬಿ.ಎನ್.ಮುನಿಕೃಷ್ಣಪ್ಪ, ರೇಷ್ಮೆ ಕೃಷಿ ಹಿತರಕ್ಷಣಾ ವೇದಿಕೆ ಜಿಲ್ಲಾ ಘಟಕದ ಸಂಚಾಲಕ ಯಲುವಹಳ್ಳಿ ಸೊಣ್ಣೇಗೌಡ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT