ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೇಷ್ಮೆ ಕಚೇರಿಗೆ ಬೀಗ ಜಡಿದ ರೈತರು

Last Updated 21 ಫೆಬ್ರುವರಿ 2011, 18:30 IST
ಅಕ್ಷರ ಗಾತ್ರ

ಬಾಗೇಪಲ್ಲಿ: ಸರ್ಕಾರದ ವತಿಯಿಂದ ನೀಡಲಾಗುತ್ತಿರುವ ಪರಿಕರ, ಸಬ್ಸಿಡಿ, ಇತರ ಸೌಲಭ್ಯಗಳನ್ನು ತಾಲ್ಲೂಕಿನ ರೈತರಿಗೆ ಸಮರ್ಪಕವಾಗಿ ಪೂರೈಸುತ್ತಿಲ್ಲ ಎಂದು ಆರೋಪಿಸಿ ರೈತ ಸಂಘ-ಹಸಿರು ಸೇನೆಯ ಕಾರ್ಯಕರ್ತರು ಸೋಮವಾರ ರೇಷ್ಮೆ ಇಲಾಖೆ ಕಚೇರಿಗೆ ಬೀಗ ಜಡಿದು ಸೋಮವಾರ ಪ್ರತಿಭಟನೆ ನಡೆಸಿದರು.

ರೇಷ್ಮೆ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿ, ಬೀಗ ಜಡಿದ ಪ್ರತಿಭಟನಾಕಾರರು, ‘ರೇಷ್ಮೆ ಇಲಾಖೆಯ ಅಧಿಕಾರಿಗಳು ರೈತರಿಗೆ ಸರ್ಕಾರಿ ಸೌಲಭ್ಯ ಕಲ್ಪಿಸಲು ನಿರ್ಲಕ್ಷ್ಯ ತೋರುತ್ತಿದ್ದಾರೆ. ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಲಕ್ಷ್ಮಿನಾರಾಯಣರೆಡ್ಡಿ ಮಾತನಾಡಿ, ‘ರೇಷ್ಮೆ ಇಲಾಖೆ ವತಿಯಿಂದ ಹಲವು ಪರಿಕರಗಳು, ಸೌಲಭ್ಯಗಳು ರೈತರಿಗೆ ಸಿಗುತ್ತಿಲ್ಲ. ರೈತರತ್ತ ಕಾಳಜಿ ತೋರುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರೈತ ಸಂಘದ ತಾಲ್ಲೂಕು ಉಪಾಧ್ಯಕ್ಷ ಕೆ.ಜಿ.ಆದಿನಾರಾ ಯಣರೆಡ್ಡಿ, ನರಸಿಂಹರೆಡ್ಡಿ, ರಘುನಾಥರೆಡ್ಡಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT