ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತ ವಿರೋಧಿ ನೀತಿ ವಿರುದ್ಧ ಪ್ರತಿಭಟನೆ

Last Updated 22 ಮೇ 2012, 8:50 IST
ಅಕ್ಷರ ಗಾತ್ರ

ಸೊರಬ: ರೈತ ವಿರೋಧಿ ನೀತಿ ಮತ್ತು ವಿವಿಧ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲ್ಲೂಕು ಶಾಖೆ ವತಿಯಿಂದ ಸೋಮವಾರ ಆನವಟ್ಟಿಯಲ್ಲಿ ಪ್ರತಿಭಟನೆ ಹಾಗೂ ಸಾರ್ವಜನಿಕ ಸಭೆ ನಡೆಯಿತು.

ರಾಜ್ಯ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ಕೆ. ಮಂಜುನಾಥಗೌಡ ಮಾತನಾಡಿ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ತಮ್ಮ ನ್ಯಾಯಯುತ ಬೇಡಿಕೆಗಾಗಿ ಹೋರಾಟ ಮಾಡುವ ರೈತರ ಮೇಲೆ ದಬ್ಬಾಳಿಕೆ ನಡೆಸುತ್ತಾ ಅವರನ್ನು ಜೈಲಿಗೆ ಕಳುಹಿಸುತ್ತಿರುವುದು ಬಿಜೆಪಿ ಸರ್ಕಾರದ ಸಾಧನೆಯಾಗಿದೆ ಎಂದು ಆರೋಪಿಸಿದರು.

ಹಲವಾರು ವರ್ಷಗಳಿಂದ ರೈತರು ಬಗರ್‌ಹುಕುಂ ಜಮೀನು ಸಾಗುವಳಿ ಮಾಡಿಕೊಂಡು ಜೀವನ ನಡೆಸುತ್ತಿರುವ ರೈತರನ್ನು ಒಕ್ಕಲೆಬ್ಬಿಸುವುದನ್ನು ಅರಣ್ಯ ಇಲಾಖೆಯವರು ನಿಲ್ಲಿಸಬೇಕು. ಇದೇ ರೀತಿ ಮುಂದುವರಿದರೆ ಸರ್ಕಾರದ ವಿರುದ್ಧ ರೈತರು ಬೀದಿಗಿಳಿದು ಹೋರಾಟ ಮಾಡಿ ಮುಖ್ಯಮಂತ್ರಿಗೆ ಸರಿಯಾದ ಉತ್ತರ ನೀಡಬೇಕಾಗುತ್ತದೆ ಎಂದರು.

ತಾಲ್ಲೂಕು ರೈತ ಸಂಘದ ಅಧ್ಯಕ್ಷ ಬಿ.ಪಿ. ವೀರಭದ್ರಗೌಡ ಮಾತನಾಡಿ, ನ್ಯಾಯಸಮ್ಮತ ಹೋರಾಟ ನಡೆಸಿದ ತಾಲ್ಲೂಕಿನ ಎಣ್ಣೆಕೊಪ್ಪ ಗ್ರಾಮದ ರೈತರನ್ನು ಒಕ್ಕಲೆಬ್ಬಿಸಿ ಅವರನ್ನು ಜೈಲಿಗೆ ಕಳುಹಿಸಿರುವುದು ಬಿಜೆಪಿಯವರಿಗೆ ರೈತರ ಮೇಲಿರುವ ಕಾಳಜಿಯನ್ನು ತೋರಿಸುತ್ತದೆ ಎಂದರು.

ಉಮೇಶ ಪಾಟೀಲ್ ಮಾತನಾಡಿ, ಯಾವುದೇ ಸಮಯದಲ್ಲಿ ರೈತರು ತಮ್ಮ ಕೆಲಸ ಕಾರ್ಯಗಳಿಗೆ ಸರ್ಕಾರಿ ಇಲಾಖೆಗಳಿಗೆ ಹೋದಾಗ ಅಧಿಕಾರಿಗಳಿಂದ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ರೈತರನ್ನು ಕೇವಲವಾಗಿ ಕಾಣುವ ಸರ್ಕಾರ ಹಾಗೂ ಅಧಿಕಾರಿಗಳು ರೈತರ ಕೆಲಸ ಕಾರ್ಯಗಳನ್ನು ಸರಿಯಾದ ಸಮಯಕ್ಕೆ ನಡೆಸಿಕೊಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಅಂತಹ ಅಧಿಕಾರಿಗಳು ಹಾಗೂ ಸರ್ಕಾರದ ವಿರುದ್ಧ ನ್ಯಾಯಸಮ್ಮತ ಹೋರಾಟಕ್ಕಾಗಿ ಯಾವುದೇ ರೀತಿಯ ಚಳವಳಿ ಮಾಡಲು ರೈತ ಸಂಘ ಹಿಂದೆ ಸರಿಯವುದಿಲ್ಲ ಎಂದು ಎಚ್ಚರಿಸಿದರು.

ಸ್ಥಳಕ್ಕೆ ಕಷಿ ಅಧಿಕಾರಿ, ವಲಯ ಅರಣ್ಯಾಧಿಕಾರಿ ಹಾಗೂ ಮೆಸ್ಕಾಂ ಎಸ್.ಒ. ಭೇಟಿ ನೀಡಿ ರೈತರ ಅಹವಾಲನ್ನು ಸ್ವೀಕರಿಸಿದರು.

ವಿಠ್ಠಲ ದೇವಸ್ಥಾನದಿಂದ ನಾಡಕಚೇರಿವರೆಗೆ ಮೆರವಣಿಗೆ ನಡೆಸಿ ಉಪ ತಹಶೀಲ್ದಾರ್ ವಸಂತಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ಶಿವಣ್ಣ ಹುಣಸವಳ್ಳಿ, ಚಿಮಣೂರು ಹುಚ್ಚಪ್ಪ, ಬಸವರಾಜಗೌಡ ಹೆಗ್ಗೋಡು, ಈಶ್ವರಪ್ಪ ಚಿಮಣೂರು, ಶಫೀರ್, ಶಫಿವುಲ್ಲಾ, ಮಕಬೂಲ್‌ಸಾಬ್, ಶಿವಪ್ಪ ಚಿಕ್ಕಸವಿ, ಹನುಮಂತಪ್ಪ ತಲ್ಲೂರು, ವೀರಬಸಪ್ಪ ಬಣಕಾರ್, ಈಶ್ವರಪ್ಪ ಕೊಡಕಣಿ, ವಿರೂಪಾಕ್ಷ, ಶೇಖರಯ್ಯ, ಕಲ್ಲಪ್ಪ, ಸಂತೋಷ ಹಣಜಿ, ಶಿವಪ್ಪ ಚಿಕ್ಕಸವಿ, ಅಡಿವೆಪ್ಪ, ಜ್ಞಾನೇಶ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT