ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಕಡೆಗಣಿಸಿದ ಸಚಿವರು

Last Updated 5 ಜುಲೈ 2012, 9:10 IST
ಅಕ್ಷರ ಗಾತ್ರ

ಹೊನ್ನಾಳಿ:   ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ತಾಲ್ಲೂಕಿನ ಬಡ ರೈತರತ್ತ ತಿರುಗಿಯೂ ನೋಡುತ್ತಿಲ್ಲ ಎಂದು ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಎಂ.ಆರ್. ಮಹೇಶ್ ಕಟಕಿಯಾಡಿದರು.  ತುಂಗಾ ಎಡನಾಲೆಯಲ್ಲಿ ಅಪಾರ ಪ್ರಮಾಣದ ಹೂಳು ತುಂಬಿರುವ ಕಾರಣ ದೊಡ್ಡೇರಿ ಗ್ರಾಮದಿಂದ ಬಳ್ಳೇಶ್ವರ ಗ್ರಾಮದವರೆಗೆ ಸಮರ್ಪಕವಾಗಿ ನೀರು ಲಭಿಸುತ್ತಿಲ್ಲ.

ಹರಳಹಳ್ಳಿ, ಬಿದರಗಡ್ಡೆ, ಮಾದಾಪುರ, ಹಿರೇಮಠ, ಬಲಮುರಿ, ಕೊನಾಯಕನಹಳ್ಳಿ ಸೇರಿದಂತೆ ಅನೇಕ ಗ್ರಾಮಗಳ ರೈತರು ನೀರಿನ ಕೊರತೆಯಿಂದ ಕಂಗಾಲಾಗಿದ್ದಾರೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ರಾಜ್ಯದ ವೈನ್‌ಶಾಪ್‌ಗಳ ಮಾಲೀಕರಿಂದ ಸಾವಿರಗಟ್ಟಲೇ ಮಾಮೂಲು ಹಣ ವಸೂಲಿ ಮಾಡುವುದರಲ್ಲೇ ರೇಣುಕಾಚಾರ್ಯ ನಿರತರಾಗಿದ್ದಾರೆ ಎಂದು ಆರೋಪಿಸಿದರು.

ಜೆಡಿಎಸ್ ಮುಖಂಡ ತುಮ್ಮಿನಕಟ್ಟಿ ನಾಗರಾಜ್ ಮಾತನಾಡಿ, ಈ ಹಿಂದೆ ಎಂದೂ ಕಂಡು-ಕೇಳರಿಯದಷ್ಟು ಜಾತಿ ರಾಜಕೀಯವನ್ನು ಬಿಜೆಪಿ ಸರ್ಕಾರ ಮಾಡುತ್ತಿದೆ. ರಾಜ್ಯದ ಲಿಂಗಾಯತ ಸಮುದಾಯಕ್ಕೆ ಅವಮಾನವಾಗುತ್ತಿದೆ. ಕಳೆದೆರಡು ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳಿಂದ ಜನ ಬೇಸತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ವನಜಾಕ್ಷಮ್ಮ, ಲಕ್ಷ್ಮಿದೇವಮ್ಮ, ಯುವ ಘಟಕದ ಅಧ್ಯಕ್ಷ ಬಿ.ಎಸ್. ಆನಂದ್ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT