ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಪ್ರಗತಿಗೆ ಬ್ಯಾಂಕ್ ಸೇವೆ ಅಗತ್ಯ

Last Updated 8 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಕವಿತಾಳ: ಗುಣಮಟ್ಟದ ಸೇವೆ ಮತ್ತು ಆರೋಗ್ಯಕರ ಸ್ಪರ್ಧೆ ಇದ್ದಾಗ ಮಾತ್ರ ಯಾವುದೇ ಕ್ಷೇತ್ರದ ಅಭಿವೃದ್ಧಿ ಸಾಧ್ಯ ಎಂದು ತುಂಗಭದ್ರಾ ಕಾಡಾ ಅಧ್ಯಕ್ಷ ಬಸನಗೌಡ ಬ್ಯಾಗವಾಟ್ ಹೇಳಿದರು.ಪಟ್ಟಣದ ಕಲ್ಮಠ ಕಲ್ಯಾಣ ಮಂಟಪದಲ್ಲಿ ಗುರುವಾರ ಏರ್ಪಡಿಸಿದ್ದ `ಕವಿತಾಳ ಪತ್ತಿನ ಸಹಕಾರಿ ಬ್ಯಾಂಕ್~ನ 10ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

10 ವರ್ಷಗಳ ಅವಧಿಯಲ್ಲಿ ಸಹಕಾರಿ ಬ್ಯಾಂಕ್‌ಗಳು ಜಿಲ್ಲೆಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ. ಜನಸಾಮಾನ್ಯರ ಅಗತ್ಯಕ್ಕೆ ಅನುಗುಣವಾಗಿ ಸೇವೆ ಹಾಗೂ ಸೌಲಭ್ಯಗಳನ್ನು ನೀಡುವ ಮೂಲಕ ಸಹಕಾರಿ ಬ್ಯಾಂಕ್‌ಗಳು ಗ್ರಾಮೀಣ ಜನರ ಆರ್ಥಿಕ ಸ್ಥಿತಿ ಸುಧಾರಣೆ ಮಾಡಿವೆ ಎಂದು ಹೇಳಿದರು. ಕೆಓಎಫ್ ಅಧ್ಯಕ್ಷ ಮಹಾಂತೇಶ ಪಾಟೀಲ್ ಅತ್ನೂರ್, ಜಿಲ್ಲಾ ಸಹಕಾರ ಬ್ಯಾಂಕ್  ಅಧ್ಯಕ್ಷ ವಿಶ್ವನಾಥ ಪಾಟೀಲ್ ತೋರಣದಿನ್ನಿ ಮಾತನಾಡಿದರು.

ಪ್ರಸಕ್ತ ವರ್ಷ ಅಂದಾಜು ರೂ.11.28ಲಕ್ಷ ನಿವ್ವಳ ಲಾಭ ಗಳಿಸಿದ್ದು ಷೇರುದಾರರಿಗೆ ಶೇ.18 ಡಿವಿಡೆಂಡ್ ಅನ್ನು  ಬ್ಯಾಂಕಿನ ಅಧ್ಯಕ್ಷ ಆದನಗೌಡ ಗೂಗೆಬಾಳ ಘೋಷಿಸಿದರು. ಕಲ್ಮಠದ ಬಸವಲಿಂಗ ಮಹಾಸ್ವಾಮಿ ಸಾನ್ನಿಧ್ಯ ವಹಿಸಿದ್ದರು.

ಜಿಲ್ಲಾ ಪಂಚಾಯಿತಿ ಸದಸ್ಯ ಗಂಗಣ್ಣ ನಾಯಕ, ಬಿಜೆಪಿ ಮುಖಂಡ ಚಂದ್ರಕಾಂತ ಗೂಗೆಬಾಳ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಕರಿಯಪ್ಪ ತೋಳ, ಹುಸೇನಪ್ಪ ವಟಗಲ್, ಎಪಿಎಂಸಿ ನಿರ್ದೇಶಕ ಯಮನಪ್ಪ ದಿನ್ನಿ, ವೀರಾರಡ್ಡೆಪ್ಪ ಭಾವಿಕಟ್ಟಿ, ಗುರುರಾಜ ಬಾಗೋಡಿ ವೇದಿಕೆಯಲ್ಲಿ ಇದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT