ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಮೇಲೆ ಲಾಠಿ: ಕೊಪ್ಪಳ ಬಂದ್

Last Updated 30 ಮಾರ್ಚ್ 2011, 19:00 IST
ಅಕ್ಷರ ಗಾತ್ರ

ಕೊಪ್ಪಳ:ಉದ್ಯೋಗ ಖಾತರಿ ಯೋಜನೆಯ ಕೂಲಿ ಹಣ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ರೈತರ ಮೇಲೆ ಲಾಠಿ ಪ್ರಹಾರ ಮಾಡಿದ ಘಟನೆಯನ್ನು ಖಂಡಿಸಿ ಬುಧವಾರ ಕರೆ ನೀಡಲಾಗಿದ್ದ ಕೊಪ್ಪಳ ಬಂದ್ ಶಾಂತಯುತವಾಗಿತ್ತು.ಉದ್ಯೋಗ ಖಾತರಿ ಭ್ರಷ್ಟಾಚಾರ ವಿರೋಧಿ ಒಕ್ಕೂಟ ಬಂದ್ ಕರೆ ನೀಡಿತ್ತು. ಬಹುತೇಕ ವರ್ತಕರು ಸ್ವಯಂ ಪ್ರೇರಿತರಾಗಿ ಅಂಗಡಿ-ಮುಂಗಟ್ಟುಗಳು ಬೆಳಿಗ್ಗೆಯಿಂದಲೇ ತೆರೆಯದೇ ಇರುವ ಮೂಲಕ ಬಂದ್‌ಗೆ ಬೆಂಬಲ ನೀಡಿದರು. ಒಕ್ಕೂಟದ ಪದಾಧಿಕಾರಿಗಳು ಮೊದಲೇ ಪ್ರಕಟಿಸಿದ ಹಿನ್ನೆಲೆಯಲ್ಲಿ ಬಸ್ ಸಂಚಾರಕ್ಕೆ ಯಾವುದೇ ತೊಂದರೆಯಾಗಲಿಲ್ಲ. ಅಲ್ಲದೆ ದ್ವಿತೀಯ ಪಿ.ಯು.ಸಿ ಪರೀಕ್ಷೆ ಸಹ ಅಬಾಧಿತವಾಗಿತ್ತು.

ಬೆಳಿಗ್ಗೆಯಿಂದಲೇ ಕೇಂದ್ರೀಯ ಬಸ್ ನಿಲ್ದಾಣ, ಜವಾಹರ್ ರಸ್ತೆ ಹಾಗೂ ಗಡಿಯಾರ ಕಂಬದಿಂದ ಗವಿಮಠಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿನ ಅಂಗಡಿಗಳು ಮುಚ್ಚಿದ್ದವು. ಆದರೆ, ಸಾಲಾರ್‌ಜಂಗ್ ರಸ್ತೆಯಲ್ಲಿನ ಅಂಗಡಿಗಳು ವ್ಯಾಪಾರದಲ್ಲಿ ನಿರತವಾಗಿದ್ದುದು ಕಂಡು ಬಂದಿತು. ಆಸ್ಪತ್ರೆ ಮತ್ತು ಔಷಧ ಅಂಗಡಿಗಳನ್ನು ಹೊರತುಪಡಿಸಿ ಚಿತ್ರಮಂದಿರ, ಖಾಸಗಿ ಕಚೇರಿಗಳು ಸಂಪೂರ್ಣ ಬಂದಾಗಿದ್ದವು.

ರಾಜ್ಯ ಹಾಗೂ ಕೇಂದ್ರದ ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು.ಮುಂಜಾಗ್ರತಾ ಕ್ರಮವಾಗಿ ನೆರೆಯ ರಾಯಚೂರು ಜಿಲ್ಲೆಯಿಂದ ಪೊಲೀಸ್ ಪಡೆಯನ್ನು ಕರೆಸಲಾಗಿತ್ತು. ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿರುವ ಕೆ.ಎಸ್.ಆರ್.ಪಿ.ಯ ತುಕಡಿ ಸಹ ಬಂದೋಬಸ್ತ್‌ಗಾಗಿ ನಿಯೋಜನೆಗೊಂಡಿತ್ತು.

ನಗರದ ತಹಸೀಲ ಕಚೇರಿಯಿಂದ ಆರಂಭವಾದ ಮೆರವಣಿಗೆ ಜವಾಹರ ರಸ್ತೆ, ಗಡಿಯಾರ ಕಂಬ ವೃತ್ತ, ಗವಿಮಠದ ಮೂಲಕ ಬಸವೇಶ್ವರ ವೃತ್ತ ತಲುಪಿ ಬಹಿರಂಗ ಸಭೆಯಾಗಿ ಪರಿವರ್ತನೆಗೊಂಡಿತು. ದಾರಿಯುದ್ದಕ್ಕೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ರೈತರ ಮೇಲೆ ಲಾಠಿ ಪ್ರಹಾರ ನಡೆಸಿದ ಪೊಲೀಸರ ಕ್ರಮವನ್ನು ಖಂಡಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT