ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲು ವಿಸ್ತರಣೆಗೆ ಕೋರಿ ಅರ್ಜಿ: ಕೇಂದ್ರ, ರಾಜ್ಯಕ್ಕೆ ಹೈಕೋರ್ಟ್ ನೋಟಿಸ್

Last Updated 22 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರಿನಿಂದ ಮಂಗಳೂರಿನವರೆಗೆ ಇರುವ ರಾತ್ರಿ ರೈಲಿನ ಸೌಲಭ್ಯವನ್ನು ಕೊಂಕಣ ರೈಲ್ವೆ ಮಾರ್ಗದ ಮೂಲಕ ಕಾರವಾರದವರೆಗೆ ವಿಸ್ತರಿಸಲು ಆದೇಶಿಸುವಂತೆ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಈ ಅರ್ಜಿಗೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಹಾಗೂ ನ್ಯಾಯಮೂರ್ತಿ ಬಿ.ವಿ.ನಾಗರತ್ನಾ ಅವರನ್ನು ಒಳಗೊಂಡ ವಿಭಾಗೀಯ ಪೀಠ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ  ಬುಧವಾರ ನೋಟಿಸ್ ಜಾರಿಗೆ ಆದೇಶಿಸಿದೆ.

ಇದೇ ಕೋರಿಕೆ ಇಟ್ಟು ಈ ಹಿಂದೆಯೂ ಅರ್ಜಿ ಸಲ್ಲಿಸಲಾಗಿತ್ತು. ಕಳೆದ ಮೇ ತಿಂಗಳಿನಲ್ಲಿ ಆದೇಶ ಹೊರಡಿಸಿದ್ದ ಕೋರ್ಟ್, ಮೂರು ತಿಂಗಳ ಒಳಗೆ ನಿರ್ಧಾರ ತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಆದೇಶಿಸಿತ್ತು.

ಆದರೆ, ಈ ಆದೇಶ ಪಾಲನೆ ಆಗಿಲ್ಲ ಎನ್ನುವುದು ವಕೀಲ ಶಂಕರ ಭಟ್ ಅವರ ವಾದ. `ಈ ಆದೇಶದ ನಂತರ ಕೇಂದ್ರ ಸರ್ಕಾರ ಕಳೆದ ಆಗಸ್ಟ್‌ನಲ್ಲಿ ಸಭೆ ನಡೆಸಿ ವಿಸ್ತರಣೆ ಸಾಧ್ಯವಿಲ್ಲ ಎಂದಿದೆ. ಆದರೆ ಇದಕ್ಕೆ ಕಾರಣ ಮಾತ್ರ ಇದುವರೆಗೆ ತಿಳಿಸಿಲ್ಲ. ಖಾಸಗಿ ಬಸ್‌ಗಳ ಲಾಬಿ ಇದರ ಹಿಂದೆ ಅಡಗಿದೆ~ ಎನ್ನುವುದು ಅವರ ಆರೋಪ.

`ಕಾರವಾರದವರೆಗೆ ರೈಲು ವಿಸ್ತರಿಸಿ ಎಂದು ರೈಲ್ವೆ ಇಲಾಖೆಯನ್ನು ಕೋರಿಕೊಂಡರೆ ಕಣ್ಣೂರಿನವರೆಗೆ ವಿಸ್ತರಣೆ ಮಾಡಲಾಗಿದೆ. ಇದು ನಿಯಮ ಉಲ್ಲಂಘನೆ ಹಾಗೂ ಹೈಕೋರ್ಟ್ ನೀಡಿರುವ ಆದೇಶದ ಉಲ್ಲಂಘನೆ.

ಕಾರವಾರದವರೆಗೆ ನೇರ ರೈಲು ಮಾರ್ಗವಿದ್ದರೂ ಅದನ್ನು ವಿಸ್ತರಿಸುತ್ತಿಲ್ಲ. ಈ ರೈಲು ಮಾರ್ಗ ನಿರ್ಮಾಣಕ್ಕೆ ಕರ್ನಾಟಕದ ಜನತೆ ತಮ್ಮ ಅಮೂಲ್ಯ ಜಮೀನನ್ನು ಕಳೆದುಕೊಂಡಿದ್ದಾರೆ. ಆದರೆ ಈಗ ಇರುವ ಮಾರ್ಗ ಕರ್ನಾಟಕದ ಜನರಿಗಿಂತ ಕೇರಳದ ಜನರಿಗೆ ಅನುಕೂಲ ಮಾಡಿಕೊಡುತ್ತಿದೆ~ ಎನ್ನುವುದು ಅರ್ಜಿದಾರರ ವಾದ. ವಿಚಾರಣೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT