ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲ್ವೆ ಬಜೆಟ್: ರಾಜ್ಯಕ್ಕೆ ಅನ್ಯಾಯ

Last Updated 27 ಫೆಬ್ರುವರಿ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು:  ‘ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಬೆಂಗಳೂರು- ಕನಕಪುರ- ಮಳವಳ್ಳಿ- ಕೊಳ್ಳೇಗಾಲ- ಚಾಮರಾಜನಗರ ರೈಲು ಮಾರ್ಗಕ್ಕೆ ಈ ವರ್ಷವೂ ಮಂಜೂರಾತಿ ದೊರೆಯದಿರುವುದು ರಾಜ್ಯಕ್ಕಾದ ಅನ್ಯಾಯ’ ಎಂದು ಜೆಡಿಎಸ್ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಪಿ.ಜಿ.ಆರ್. ಸಿಂಧ್ಯ ದೂರಿದ್ದಾರೆ.

ಈ ಬಾರಿಯ ರೈಲ್ವೆ ಬಜೆಟ್‌ನಲ್ಲಿ ಈ ಯೋಜನೆಯನ್ನು ಸೇರಿಸುವುದಾಗಿ ರೈಲ್ವೆ ಖಾತೆ ರಾಜ್ಯ ಸಚಿವರಾದ ಕೆ.ಎಚ್. ಮುನಿಯಪ್ಪ ಅವರು ಆಶ್ವಾಸನೆ ನೀಡಿದ್ದರು. ಆದರೆ ಬಜೆಟ್‌ನಲ್ಲಿ ಈ ಯೋಜನೆಗೆ ಹಸಿರು ನಿಶಾನೆ ದೊರೆಯದಿರುವುದು ಈ ಭಾಗದ ಜನತೆಯಲ್ಲಿ ತೀವ್ರ ನಿರಾಶೆ ಉಂಟುಮಾಡಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT