ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿ

Last Updated 7 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಮಾಗಡಿ: ಜಿಲ್ಲೆ ಎಲ್ಲಾ ಗ್ರಾಮೀಣ ಭಾಗದ ಸರ್ಕಾರಿ ಆಸ್ಪತ್ರೆಗಳಿಗೆ  ಭೂತ ಅಗತ್ಯಗಳನ್ನು ಒದಗಿಸಲು ಸಿದ್ಧವಿದ್ದು, ವೈದ್ಯರು ಸರ್ಕಾರಿ ಆಸ್ಪತ್ರೆಗಳಿಗೆ ಬರುವ ರೋಗ ಪೀಡಿತರಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಜಿಲ್ಲಾ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಕೆ.ಧನಂಜಯ ಸಲಹೆ ನೀಡಿದರು.

ಅವರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ನೂತನವಾಗಿ ಕಾರ್ಯ ಆರಂಭಿಸಿರುವ ಸ್ಕ್ಯಾನಿಂಗ್ ಮತ್ತು ಎಕ್ಸರೆ ಯಂತ್ರಗಳಿಗೆ ಚಾಲನೆ ನೀಡಿ ಮಾತನಾಡಿದರು.

`ಸರ್ಕಾರಿ ಆಸ್ಪತ್ರೆಯನ್ನು ನವೀಕರಣಗೊಳಿಸಲಾಗಿದೆ. 100ಹಾಸಿಗೆಗಳ ಸವಲತ್ತುಗಳನ್ನು ಒದಗಿಸಲಾಗುತ್ತಿದೆ. ಗ್ರಾಮೀಣ ಜನತೆಯ ಆರೋಗ್ಯದತ್ತ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ~ ಎಂದು ಜಿಲ್ಲಾ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರು ತಿಳಿಸಿದರು.

ತಾಲ್ಲೂಕು ವೈದ್ಯಾಧಿಕಾರಿ ಡಾ. ರವಿಕುಮಾರ್, ಆಡಳಿತಾಧಿಕಾರಿ ಡಾ.ಪ್ರಕಾಶ್ ತಾಲ್ಲೂಕು ಆರೋಗ್ಯ ಇಲಾಖೆಯ ಸ್ಥಿತಿಗತಿಗಳನ್ನು ವಿವರಿಸಿದರು. ತಜ್ಞ ವೈದ್ಯರಾದ ಡಾ.ಜ್ಞಾನಪ್ರಕಾಶ್, ಡಾ.ಪ್ರಭುದೇವ್ ಗೌಡ, ಡಾ.ವೀರೇಶ್, ಡಾ.ಆಶಾ, ಡಾ.ಸವಿತಾ, ಡಾ.ವಿಜಯ ಮಾತನಾಡಿದರು.

ಸಮಾಜ ಸೇವಕಿ ಮುದ್ದಮ್ಮ, ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಮಘದ ಅಧ್ಯಕ್ಷ ಎ.ಎಲ್.ಮಹಲಿಂಗಯ್ಯ, ಗಂಗಾಧರ್, ರಂಗಧಾಮಯ್ಯ, ಹಿರಿಯ ದಾದಿಯರಾದ ಸಾವಿತ್ರಮ್ಮ, ಮಂಜುಳ ಹಾಗೂ ಆಸ್ಪತ್ರೆಯ ಸಿಬ್ಬಂದಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT