ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೋಜರ್ ಫೆಡರರ್‌ಗೆ ಬೆದರಿಕೆ

Last Updated 5 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೀಜಿಂಗ್ (ಎಪಿ): ವಿಶ್ವ ದಾಖಲೆಯ ಗ್ರ್ಯಾನ್‌ಸ್ಲಾಮ್ ಸಿಂಗಲ್ಸ್ ಪ್ರಶಸ್ತಿಗಳ ಒಡೆಯ ರೋಜರ್ ಫೆಡರರ್ ಅವರಿಗೆ ಜೀವ ಬೆದರಿಕೆ ಬಂದಿರುವ ಕಾರಣ ಇಲ್ಲಿ ನಡೆಯುತ್ತಿರುವ ಶಾಂಘೈ ಮಾಸ್ಟರ್ಸ್ ಟೆನಿಸ್ ಟೂರ್ನಿಗೆ ಬಿಗಿ ಭದ್ರತೆ ಒದಗಿಸಲಾಗಿದೆ.

`ಟೆನಿಸ್ ಆಟಗಾರ ಸ್ವಿಟ್ಜರ್ಲೆಂಡ್‌ನ ಫೆಡರರ್‌ಗೆ ಆನ್‌ಲೈನ್ ಮೂಲಕ ಕೊಲೆ ಬೆದರಿಕೆ ಇರುವುದು ನಮ್ಮ ಗಮನಕ್ಕೆ ಬಂದಿದೆ. ಹಾಗಾಗಿ ಈ ಟೂರ್ನಿಯಲ್ಲಿ ಪಾಲ್ಗೊಂಡಿರುವ ಫೆಡರರ್‌ಗೆ ಭದ್ರತೆ ಹೆಚ್ಚಿಸಲಾಗಿದೆ~ ಎಂದು ಟೂರ್ನಿಯ ಅಧಿಕಾರಿ ಯಾಂಗ್ ಯಿಬಿನ್ ಹೇಳಿದ್ದಾರೆ ಎಂಬುದನ್ನು ಶಾಂಘೈ ಪತ್ರಿಕೆಯೊಂದು ವರದಿ ಮಾಡಿದೆ.

ಫೆಡರರ್ ಅವರ ಅಭಿಮಾನಿಗಳ ವೆಬ್‌ಸೈಟ್ `ಬ್ಲೂ ಕ್ಯಾಟ್ ಪಾಲಿಥೆಸಿಮ್ ಫೌಂಡರ್ 07~ನಲ್ಲಿ ಅಪರಿಚಿತರು ಕೊಲೆ ಬೆದರಿಕೆ ಇರುವ ಸಂದೇಶವನ್ನು ಹರಿಬಿಟ್ಟಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಶಾಂಘೈ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT