ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಂಚ ಪ್ರಕರಣ: ಆರೋಪಿ ನೌಕರನಿಗೆ ಆರು ತಿಂಗಳ ಸಜೆ, ದಂಡ

Last Updated 3 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಲಂಚ ಪಡೆದುಕೊಂಡ ಪ್ರಕರಣವೊಂದರಲ್ಲಿ ಬೆಂಗಳೂರು ದಕ್ಷಿಣ ತಾಲ್ಲೂಕಿನ ವಿಶೇಷ ತಹಶೀಲ್ದಾರ್ ಅವರ ಮಾಜಿ ಪ್ರಥಮ ದರ್ಜೆ ಸಹಾಯಕ ಎಸ್.ಕೆ. ನಾರಾಯಣಮೂರ್ತಿ ಅವರನ್ನು ತಪ್ಪಿತಸ್ಥರೆಂದು ಘೋಷಿಸಿರುವ ಬೆಂಗಳೂರು ನಗರ ಜಿಲ್ಲೆಯ ವಿಶೇಷ ನ್ಯಾಯಾಲಯ ಅವರಿಗೆ ಆರು ತಿಂಗಳ ಕಠಿಣ ಶಿಕ್ಷೆ ಮತ್ತು ಒಂದು ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದೆ.

ದಂಡ ಪಾವತಿಸಲು ವಿಫಲವಾದಲ್ಲಿ ಮೂರ್ತಿ ಅವರಿಗೆ ಮತ್ತೆ 15 ದಿನಗಳ ಅವಧಿಗೆ ಸಾದಾ ಶಿಕ್ಷೆ ವಿಧಿಸುವಂತೆ ನ್ಯಾಯಾಲಯ ಶನಿವಾರ ಹೊರಡಿಸಿರುವ ಆದೇಶದಲ್ಲಿ ಹೇಳಿದೆ ಎಂದು ಲೋಕಾಯುಕ್ತ ಎಡಿಜಿಪಿ ತಿಳಿಸಿದ್ದಾರೆ.

2005ರ ಮಾರ್ಚ್‌ನಲ್ಲಿ ಚನ್ನಪ್ಪ ಎನ್ನುವವರಿಂದ ರೂ 3,000 ಲಂಚ ಪಡೆಯುತ್ತಿದ್ದಾಗ ಮೂರ್ತಿ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದರು. ಪ್ರಕರಣದ ಕುರಿತು ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT