ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಂಡನ್ ಪ್ರಜೆ ಬಂಧನ

Last Updated 1 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಪಿಎಚ್‌ಡಿ ಪದವಿ ಪಡೆದಿರುವುದಾಗಿ ನಕಲಿ ದಾಖಲೆ ಪತ್ರಗಳನ್ನು ಸೃಷ್ಟಿಸಿ ಅವುಗಳ ನೆರವಿನಿಂದ ಸಹಕಾರನಗರದ ಟ್ರಯೊ ವರ್ಲ್ಡ್ ಶಾಲೆಯಲ್ಲಿ ಮುಖ್ಯೋಪಾಧ್ಯಾಯರ ಕೆಲಸಕ್ಕೆ ಸೇರಿದ್ದ ಲಂಡನ್ ಪ್ರಜೆಯನ್ನು ಕೊಡಿಗೇಹಳ್ಳಿ ಪೊಲೀಸರು ಬುಧವಾರ ಬಂಧಿಸಿದ್ದಾರೆ.

`ಪಾಲ್ ಫ್ರಾನ್ಸಿಸ್ ಮಿಕಿನ್ಸ್ (38) ಬಂಧಿತ ಆರೋಪಿ. ಪಾಲ್ ವಿರುದ್ಧ ಟ್ರಯೊ ವರ್ಲ್ಡ್ ಶಾಲೆಯ ಆಡಳಿತ ಮಂಡಳಿ ಸದಸ್ಯರು ದೂರು ಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಆತನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದಾಗ ವಂಚನೆ ಪ್ರಕರಣ ಬೆಳಕಿಗೆ ಬಂತು~ ಎಂದು ಈಶಾನ್ಯ ವಿಭಾಗದ ಡಿಸಿಪಿ ಬಿ.ಆರ್.ರವಿಕಾಂತೇಗೌಡ   `ಪ್ರಜಾವಾಣಿ~ಗೆ ತಿಳಿಸಿದರು.

`ಆರೋಪಿಯು ಲಂಡನ್‌ನ ಶೆಫೀಲ್ಡ್ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪದವಿ ಪಡೆದಿರುವುದಾಗಿ ನಕಲಿ ದಾಖಲೆ ಪತ್ರಗಳನ್ನು ಸೃಷ್ಟಿಸಿದ್ದ. ಅಲ್ಲದೇ ಅವುಗಳ ನೆರವಿನಿಂದ ಆ ಶಾಲೆಯಲ್ಲಿ ಕೆಲಸ ಸಹ ಪಡೆದಿದ್ದ~ ಎಂದು ಹೇಳಿದರು.
ಟ್ರಯೊ ವರ್ಲ್ಡ್ ಶಾಲೆಯ 12 ವರ್ಷದ ವಿದ್ಯಾರ್ಥಿಯೊಬ್ಬನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ ಪಾಲ್‌ನನ್ನು ಜ.20ರಂದು ಬಂಧಿಸಲಾಗಿತ್ತು. ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಇದೀಗ ಭಾರತೀಯ ದಂಡ ಸಂಹಿತೆ ಕಲಂ 420ರ ಅನ್ವಯ ವಂಚನೆ ಪ್ರಕರಣ ದಾಖಲಿಸಿಕೊಂಡು ಪುನಃ ಬಂಧಿಸಲಾಗಿದೆ ಎಂದು ರವಿಕಾಂತೇಗೌಡ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT