ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಕ್ಷಾಂತರ ಮಂದಿಯ ಕಣ್ತುಂಬಿದ ಜಂಬೂ ಸವಾರಿ

Last Updated 6 ಅಕ್ಟೋಬರ್ 2011, 11:10 IST
ಅಕ್ಷರ ಗಾತ್ರ

ಮೈಸೂರು : ಮೈಸೂರು ದಸರಾ ಎಷ್ಟೊಂದು ಸುಂದರ ... ಹೌದು ಸುಂದರ ದಸರೆಯ ವೈಭವದ ಜಂಬೂ ಸವಾರಿ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಗುರುವಾರ ನೆರವೇರಿತು. 

ನೆತ್ತಿ ಮೇಲೆ ಉರಿಯುತ್ತಿದ್ದ ಸೂರ್ಯನ ಬಿಸಿಲಿನ ಝಳವನ್ನು ಲೆಕ್ಕಿಸದೆ ದೇಶ-ವಿದೇಶಗಳಿಂದ ಆಗಮಿಸಿದ್ದ ಲಕ್ಷಾಂತರ ಮಂದಿ ವೈಭವದ ಜಂಬೂ ಸವಾರಿಗೆ ಸಾಕ್ಷಿಯಾದರು.

ಸತತ 13ನೇ ಬಾರಿಗೆ ಚಿನ್ನದ ಅಂಬಾರಿಯಲ್ಲಿ ದೇವಿ ಚಾಮುಂಡಿಯನ್ನು ಹೊತ್ತ ಬಲರಾಮ ಘನಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಿದ್ದರೆ ಅವನನ್ನು 11 ಇತರೆ ಆನೆಗಳು ಅಷ್ಟೇ ಗಾಂಭೀರ್ಯದಿಂದ ಹಿಂಬಾಲಿಸಿದವು. ಇವುಗಳ ಜತೆಗೆ ಕುದುರೆಗಳು, ಒಂಟೆಗಳು, ಪೊಲೀಸ್ ತುಕಡಿಗಳು, 34 ಸ್ತಬ್ಧಚಿತ್ರಗಳು, ನೂರಾರು ಜಾನಪದ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು.

ಮಧ್ಯಾಹ್ನ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರು ಸಾಂಪ್ರದಾಯಿಕವಾಗಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಐತಿಹಾಸಿಕ ಜಂಬೂ ಸವಾರಿಗೆ ಚಾಲನೆ ನೀಡಿದರು. ನಂತರ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದ ಜಂಬೂಸವಾರಿಯನ್ನು ದೇಶ ವಿದೇಶಗಳಿಂದ ಆಗಮಿಸಿದ್ದ ಲಕ್ಷಾಂತರ ಮಂದಿ ಕಣ್ತುಂಬಿಕೊಂಡರು. ನಂತರ ಸಂಜೆ ಬನ್ನಿಮಂಟಪಕ್ಕೆ ಮೆರವಣಿಗೆ ತೆರಳಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT