ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ಅಲ್ಪಸಂಖ್ಯಾತರಿಂದ ಮೆರವಣಿಗೆ

Last Updated 22 ಜನವರಿ 2011, 7:10 IST
ಅಕ್ಷರ ಗಾತ್ರ

ಬಳ್ಳಾರಿ: ಲೈಂಗಿಕ ಅಲ್ಪಸಂಖ್ಯಾತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಲೈಂಗಿಕ ಅಲ್ಪಸಂಖ್ಯಾತರ ವೇದಿಕೆಯ ಜಿಲ್ಲಾ ಘಟಕವು ಶುಕ್ರವಾರ ಬೃಹತ್ ರ್ಯಾಲಿ ಏರ್ಪಡಿಸಿತ್ತು.

ನಗರದ ಮೋತಿ ವೃತ್ತದಿಂದ ಆರಂಭವಾದ ರ್ಯಾಲಿಯಲ್ಲಿ ಭಾಗವಹಿಸಿದ ನೂರಾರು ಲೈಂಗಿಕ ಅಲ್ಪಸಂಖ್ಯಾತ ಕಾರ್ಯಕರ್ತರು, ರಾಯಲ್ ವೃತ್ತ, ಬೆಂಗಳೂರು ರಸ್ತೆ, ಬ್ರೂಸ್‌ಪೇಟೆ ರಸ್ತೆ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಅರ್ಪಿಸಿದರು.

ವಸತಿ ಸೌಲಭ್ಯ, ಮತದಾರರ ಗುರುತಿನ ಚೀಟಿ, ಪಾಸ್‌ಪೋರ್ಟ್, ಡ್ರೈವಿಂಗ್ ಲೈಸೆನ್ಸ್, ಉಳಿತಾಯ ಮತ್ತು ಸಾಲ ಸೌಲಭ್ಯ, ವಿಮೆ ಮತ್ತು ವೃದ್ಧಾಪ್ಯ ವೇತನ ಕಲ್ಪಿಸುವುದಲ್ಲದೆ, ಲೈಂಗಿಕ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕು ಎಂದು ವೇದಿಕೆಯ ಜಿಲ್ಲಾ ಘಟಕದ ಕಾರ್ಯದರ್ಶಿ ಕೆ.ಶೋಭಾ (ಜೋಗಪ್ಪ) ಒತ್ತಾಯಿಸಿದರು.

ಪೊಲೀಸರು, ಗೂಂಡಾಗಳು ಹಾಗೂ ಸಾರ್ವಜನಿಕರಿಂದ ಲೈಂಗಿಕ ಅಲ್ಪಸಂಖ್ಯಾತರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದು, ಈ ದೌರ್ಜನ್ಯ ತಡೆಗಟ್ಟಲು ಸೂಕ್ತ ಕ್ರಮ ಜರುಗಿಸಬೇಕು ಎಂದು ಅವರು ಆಗ್ರಹಿಸಿದರು.

ಲೈಂಗಿಕ ಅಲ್ಪಸಂಖ್ಯಾತರು ಹಲವು ಕಾರಣಗಳಿಂದ ತಮ್ಮ ಸ್ಥಿತಿಯನ್ನು ಯಾರ ಮುಂದೆಯೂ ಹೇಳಿಕೊಳ್ಳದ ಹಾಗೂ ಬೆಂಬಲವಿಲ್ಲದ ವಾತಾವರಣಕ್ಕೆ ಸಿಲುಕಿ ಅಸಹಾಯಕರಾಗಿ ತಮ್ಮ ಊರನ್ನೇ ಬಿಟ್ಟು ಬಂದಿರುತ್ತಾರೆ. ಈ ಸಮುದಾಯದ ಬಗ್ಗೆ ಅರಿವು ಮತ್ತು ತಿಳಿವಳಿಕೆ ನೀಡುವ ಕಾರ್ಯಕ್ರಮವನ್ನುಸರ್ಕಾರ ಏರ್ಪಡಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯ ಲೈಂಗಿಕ ಅಲ್ಪಸಂಖ್ಯಾತರ ವೇದಿಕೆ ಕಾರ್ಯಕರ್ತರಾದ ಮಹೇಶ ಪಾಟೀಲ, ಶ್ಯಾಮ್, ಕೋಥಿ ಮತ್ತಿತರರು ರ್ಯಾಲಿಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT