ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ಕಿರುಕುಳ: ಯೆಹೂದಿ ಗುರು ಬಂಧನ

Last Updated 11 ಡಿಸೆಂಬರ್ 2012, 19:39 IST
ಅಕ್ಷರ ಗಾತ್ರ

ನ್ಯೂಯಾರ್ಕ್ (ಎಎಫ್‌ಪಿ): ಇಲ್ಲಿನ ಸಂಪ್ರದಾಯಸ್ಥ ಯೆಹೂದಿ ಧಾರ್ಮಿಕ ನಾಯಕರೊಬ್ಬರು ತಮ್ಮ ರಕ್ಷಣೆಯಲ್ಲಿದ್ದ ಬಾಲಕಿಗೆ ಸತತ ಮೂರು ವರ್ಷಗಳ ಕಾಲ ಲೈಂಗಿಕ ಕಿರುಕುಳ ನೀಡಿದ ಘಟನೆ ಬಹಿರಂಗಗೊಂಡಿದೆ.

54 ವರ್ಷದ ನೆಷೆಮ್ಯಾ ವೆಬರ್‌ಮನ್ ಈ ವ್ಯಕ್ತಿಯಾಗಿದ್ದು, 59 ಆರೋಪಗಳ ಅಡಿ ಅವರನ್ನು ತಪ್ಪಿತಸ್ಥರೆಂದು ಘೋಷಿಸಲಾಗಿದೆ. ಈ ಅಪರಾಧಗಳಿಗಾಗಿ ಅವರಿಗೆ 117 ವರ್ಷಗಳ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆಯಿದೆ. ಮಗುವಿನ ಮೇಲೆ ಅತ್ಯಾಚಾರ ಮಾಡಿರುವುದು ಗಂಭೀರ ಅಪರಾಧವಾಗಿದ್ದು, ಆ ಕೃತ್ಯಕ್ಕಾಗಿ 25 ವರ್ಷಗಳ ಶಿಕ್ಷೆ ವಿಧಿಸಬಹುದಾಗಿದೆ.

ವೆಬರ್‌ಮನ್ ತಪ್ಪಿತಸ್ಥರೆಂದು ಘೋಷಿಸಿದ ತಕ್ಷಣ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಜನವರಿ 9ರಂದು ಶಿಕ್ಷೆ ಪ್ರಕಟಿಸಲು ನಿರ್ಧರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT