ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ದೌರ್ಜನ್ಯ ಖಂಡಿಸಿ ಪ್ರತಿಭಟನೆ

Last Updated 17 ಸೆಪ್ಟೆಂಬರ್ 2013, 6:47 IST
ಅಕ್ಷರ ಗಾತ್ರ

ಹಾಸನ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸುವ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಸೋಮವಾರ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

‘ಕಳೆದ ಒಂದು ವರ್ಷದಿಂದ ದೇಶದಲ್ಲಿ  ಪ್ರತಿ 36 ನಿಮಿಷಕ್ಕೊಂದು ಅತ್ಯಾಚಾರ ಪ್ರಕರಣ ನಡೆಯುತ್ತಿದೆ. ರಾಜ್ಯದಲ್ಲಿ ಕಳೆದ ಆರು ತಿಂಗಳಲ್ಲಿ ಪ್ರತಿ ದಿನ ಎರಡು ದೌರ್ಜನ್ಯ ಪ್ರಕರಣಗಳು ನಡೆದಿವೆ. ಇದನ್ನು ನಿಯಂತ್ರಿಸಬೇಕು. ಅತ್ಯಾಚಾರ ಪ್ರಕರಣಗಳನ್ನು ಇತ್ಯರ್ಥ ಗೊಳಿಸಲು ವಿಶೇಷ ನ್ಯಾಯಾಲಯ ರಚಿಸಬೇಕು. ಅತ್ಯಾಚಾರಿಗಳಿಗೆ ಉಗ್ರ ಶಿಕ್ಷೆ ವಿಧಿಸಲು ಸಾಧ್ಯವಾಗುವಂತೆ ಕಾನೂನು ತಿದ್ದುಪಡಿ ಮಾಡಬೇಕು ಹಾಗೂ ಇಂಥ ಪ್ರಕರಣಗಳಿಗೆ ರಾಜ್ಯ ಸರ್ಕಾರ ಹೆಚ್ಚುವರಿ ಪೊಲೀಸ್‌ ವಿಶೇಷವಾಗಿ ಮಹಿಳಾ ಸಿಬ್ಬಂದಿ ನಿಯೋಜನೆ ಮಾಡಬೇಕು’ ಎಂದು ಆಗ್ರಹಿಸಿದರು.

ಮಹಿಳೆಯರ ಮೇಲೆ ದಿನ ನಿತ್ಯ ಇಂಥ ಪಕ್ರರಣಗಳು ನಡೆಯುತ್ತಿರುವುದರಿಂದ ಮಹಿಳೆಯರು ಭಯದ ವಾತಾವರಣ ದಲ್ಲಿ ಬದುಕಬೇಕಾಗಿಬಂದಿದೆ. ಹೆಣ್ಣು ಮಕ್ಕಳನ್ನು ಶಾಲೆಗಳಿಗೆ ಕಳುಹಿಸಲು ಭಯಪಡುವಂತಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶೀಘ್ರವೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT