ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ದೌರ್ಜನ್ಯ ಪ್ರಕರಣಗಳ ಏರಿಕೆ

Last Updated 7 ಫೆಬ್ರುವರಿ 2013, 11:31 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್): ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಏರಿಕೆಯಾಗುತ್ತಿದ್ದು ಇದನ್ನು ತಡೆಯಲು ಸರ್ಕಾರ ಸುಧಾರಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಾನವ ಹಕ್ಕುಗಳ ಆಯೋಗ ಗುರುವಾರ ಕೇಂದ್ರ ಸರ್ಕಾರಕ್ಕೆ ವರದಿ ನೀಡಿದೆ.

ಮನೆ ಸೇರಿದಂತೆ ಶಾಲೆ ಮತ್ತು ವಸತಿ ನಿಲಯಗಳಲ್ಲಿ ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಆಯೋಗ ಕಳವಳ ವ್ಯಕ್ತಪಡಿಸಿದೆ.

ಕಳೆದ ಡಿಸೆಂಬರ್ 16ರಂದು ದೆಹಲಿಯಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ನಂತರ ಸರ್ಕಾರ ಹೆಣ್ಣು ಮಕ್ಕಳ ರಕ್ಷಣೆ ಕುರಿತಂತೆ ಮಾನವ ಹಕ್ಕು ಆಯೋಗದ ಸದಸ್ಯರನ್ನೊಳಗೊಂಡ ಅಧ್ಯಯನ ತಂಡವನ್ನು ರಚಿಸಿತ್ತು. ದೇಶದಲ್ಲಿ ಮಹಿಳೆಯರ ರಕ್ಷಣೆ ಕುರಿತಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈವರೆಗೂ ಯಾವುದೇ ಸುಧಾರಣ ಕ್ರಮಗಳನ್ನು ಕೈಗೊಂಡಿಲ್ಲ ಎಂದು ವರದಿಯಲ್ಲಿ ಆಕ್ಷೇಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT