ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭಾ ಚುನಾವಣೆ:ಬಿಜೆಪಿಗೆ 22ಸ್ಥಾನ– ಈಶ್ವರಪ್ಪ

Last Updated 24 ಡಿಸೆಂಬರ್ 2013, 6:37 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಲೋಕಸಭಾ ಚುನಾ ವಣೆ ರಾಜ್ಯ ಮತ್ತು ದೇಶದ ಭವಿಷ್ಯ ನಿರ್ಧರಿಸಲಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸೋಮ ವಾರ ನಡೆದ ಶಕ್ತಿಕೇಂದ್ರ ತಂಡಗಳ ಕಾರ್ಯಾಗಾರ ಉದ್ಘಾಟಿಸಿ ಮಾತನಾ ಡಿದರು. ಚುನಾವಣೆಯಲ್ಲಿ ರಾಜ್ಯದ 28ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ 22ಸ್ಥಾನಗಳನ್ನು ಪಡೆದುಕೊಳ್ಳಲಿದೆ. ಇನ್ನೂ ಆರು ತಿಂಗಳಲ್ಲಿ ಮತ್ತೆ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ಭವಿಷ್ಯ ನುಡಿದರು.

ರಾಜ್ಯದಲ್ಲಿ ಪ್ರತಿ ಲೋಕಸಭಾ ಕ್ಷೇತ್ರದಲ್ಲಿ ಶಕ್ತಿಗಳ ಮೇಲ್ಮಟ್ಟದ ವಿವಿಧ ಮೋರ್ಚಾಗಳ ವಿಶೇಷ ಸಭೆ ನಡೆಯಲಿವೆ. ಕೇಂದ್ರದಲ್ಲಿ ಅಧಿಕಾರ ಹಿಡಿಯಲು ಅನುಕೂಲವಾಗುವಂತೆ ವಿಶೇಷ ಕಾರ್ಯಾಗಾರಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.

ಎಲ್ಲಾ ರಾಜ್ಯಗಳಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ದಾಖಲೆ ಪ್ರಮಾಣದಲ್ಲಿ ಜನ ಸೇರುತ್ತಿದ್ದಾರೆ. ದೇಶದ ಚಿತ್ರಣ ಬದಲಿಸುವ ಶಕ್ತಿ ಪಕ್ಷಕ್ಕಿದೆ. ಆಸಕ್ತಿ ಮೋದಿಗಿದೆ. ಕೇಂದ್ರ ಸರ್ಕಾರದ ಆಡಳಿತದಲ್ಲಿ ಮಿತಿಮೀರಿದ ಭ್ರಷ್ಟಾಚಾರ ನಡೆದಿದೆ. ಬೆಲೆ ಏರಿಕೆ ತಡೆಗಟ್ಟಲು, ರೈತರ ನೆರವಿಗೆ  ಕೇಂದ್ರ ಸರ್ಕಾರ ಮುಂದಾಗಿಲ್ಲ. ದೇಶದ ಸುರಕ್ಷತೆಗೆ ಒತ್ತು ನೀಡುತ್ತಿಲ್ಲ ಎಂದು ಟೀಕಿಸಿದರು.

ಬಿಜೆಪಿ ಸರ್ಕಾರದ ಆಡಳಿತದಲ್ಲಿ ವಿದ್ಯುತ್‌ ಸಮಸ್ಯೆ ನಿವಾರಣೆಗೆ ಮುಂದಾ ಗಿತ್ತು. ಆದರೆ ರಾಜ್ಯಸರ್ಕಾರ ವಿದ್ಯುತ್ ಸಮಸ್ಯೆಗೆ ಗಮನಹರಿಸುತ್ತಿಲ್ಲ. ಸರ್ಕಾರ ಇದೆಯೋ ಇಲ್ಲವೋ ಎಂಬುದೇ ತಿಳಿಯದಾಗಿದೆ. ಈ ಸರ್ಕಾರ ಯಾಕಾದರೂ ಬಂತಪ್ಪ ಎಂದು ಜನ ಮಾತನಾಡಿಕೊಳ್ಳಲಾರಂಭಿಸಿದ್ದಾರೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ದಿನಕ್ಕೊಂದು ಹೇಳಿಕೆ ನೀಡುತ್ತಾರೆ. ಅದಕ್ಕೆ ವಿರೋಧ ವ್ಯಕ್ತವಾದಾಗ ಆ ಹೇಳಿಕೆ ಹಿಂದಕ್ಕೆ ಪಡೆಯುತ್ತಾರೆ. ಅವರ ಮಾತಿಗೆ ಈಗ ಅರ್ಥವೆ ಇಲ್ಲದಂತಾಗಿದೆ. ಮುಖ್ಯಮಂತ್ರಿ ವಿರುದ್ಧ ಆ ಪಕ್ಷದ ಮುಖಂಡರು ಅಸಮಾಧಾನ ವ್ಯಕ್ತಪಡಿಸುತ್ತಾರೆ. ರಾಜ್ಯಾಧ್ಯಕ್ಷರು ಮತ್ತು ಮುಖ್ಯಮಂತ್ರಿಗಳ ನಡುವೆ ಉತ್ತಮ ಸಂಬಂಧ ಇಲ್ಲದಂತಾಗಿದೆ ಎಂದು ಆರೋಪಿಸಿದರು.

ಕಸ್ತೂರಿ ರಂಗನ್ ವರದಿ ನಿರೋಧಿಸಿ ನಿರ್ಣಯ ಕೈಗೊಳ್ಳಬೇಕಾಗಿರು ವುದ ರಿಂದ ಮುಖ್ಯಮಂತ್ರಿಗಳು ಕೂಡಲೇ ವಿಶೇಷ ಅಧಿವೇಶನ ಕರೆ ಯಲು ಮುಂದಾಗಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಡಿ.ಎನ್.ಜೀವರಾಜ್ ಒತ್ತಾಯಿಸಿದರು.

ಉಡುಪಿ, ಚಿಕ್ಕಮಗಳೂರು ಲೋಕ ಸಭಾ ಉಪಚುನಾವಣೆಯಲ್ಲಿ ಕೇಂದ್ರ ಸಚಿವರು ಅಡಿಕೆ ಬೆಳೆಗಾರರಿಗೆ ರೂ1400 ಕೋಟಿ ಕೊಡುಗೆ ನೀಡುವುದಾಗಿ ಭರವಸೆ ನೀಡಿದ್ದರು. ಈಗ  ಅಡಿಕೆ ಬಳಕೆ ನಿಷೇಧಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಕೊಡುಗೆ ನೀಡದಿ ದ್ದರೂ ಪರವಾಗಿಲ್ಲ. ಅಡಿಕೆ ಬೆಳೆಯಲು ಅವಕಾಶ ಮಾಡಿಕೊಡಬೇಕಾಗಿದೆ ಎಂದು ತಿಳಿಸಿದರು.ಶಾಸಕ ಸಿ.ಟಿ.ರವಿ, ಮಾಜಿ ಶಾಸಕರಾದ ಎಂ.ಪಿ. ಕುಮಾರಸ್ವಾಮಿ, ಶಿವಶಂಕರಪ್ಪ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷರಾದ ಎಂ.ಎಸ್. ಭೋಜೇಗೌಡ, ಎಂ.ಕೆ. ಪ್ರಾಣೇಶ್, ಮಂಜುನಾಥ ವೇದಿಕೆಯಲ್ಲಿದ್ದರು.

ಯಡಿಯೂರಪ್ಪ ಬಿಜೆಪಿಗೆ: ಈಶ್ವರಪ್ಪ ವಿಶ್ವಾಸ
ಚಿಕ್ಕಮಗಳೂರು: ನರೇಂದ್ರಮೋದಿ ಅವರನ್ನು ಪ್ರಧಾನಿಯನ್ನಾಗಿಸಲು ಬಿಜೆಪಿಗೆ ಮರಳುವುದಾಗಿ ಮಾತುಕತೆ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸೋಮವಾರ ನಡೆದ ಶಕ್ತಿಕೇಂದ್ರ ತಂಡಗಳ ಕಾರ್ಯಾಗಾರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಈ ವಿಷಯ ಹೇಳಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥಸಿಂಗ್ ಸೋಮವಾರ ಶಿವಮೊಗ್ಗ ಜಿಲ್ಲೆಯ ಸೊರಬಕ್ಕೆ ಆಗಮಿಸಿದ್ದು, ಯಡಿಯೂರಪ್ಪ ಅವರನ್ನು ಭೇಟಿಯಾಗಿ ಬಿಜೆಪಿಗೆ ಕರೆತರುವ ಕುರಿತು ಮಾತುಕತೆ ನಡೆಸಲಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಯಡಿಯೂರಪ್ಪ ಅವರನ್ನು ಭೇಟಿ ಮಾಡುವುದಿಲ್ಲ. ಯಾವುದೇ ರಾಜಕೀಯ ವಿಷಯ ಮಾತನಾಡುವ ಸಾಧ್ಯತೆಗಳಿಲ್ಲ ಎಂದು ಸ್ಪಷ್ಟಪಡಿಸಿದರು.

ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿದ ವೇಳೆ ಯಾವುದೇ ಬೇಡಿಕೆಯನ್ನು ಪಕ್ಷದ ಮುಂದಿಟ್ಟಿಲ್ಲ ಎಂದು ತಿಳಿಸಿ, ಅವರನ್ನು ಪಕ್ಷಕ್ಕೆ ಕರೆತರುವ ಕುರಿತು ಈಗಾಗಲೇ ರಾಷ್ಟ್ರೀಯ ನಾಯಕರ ಗಮನಕ್ಕೆ ತರಲಾಗಿದೆ. ಅವರು ಸಹ ಮತ ವ್ಯಕ್ತಪಡಿಸಿದ್ದಾರೆ ಎಂದರು.

ಅಡಿಕೆ ವಿಷವಸ್ತು ಎಂದು ಅದನ್ನು ನಿಷೇಧಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ರಾಜ್ಯಸರ್ಕಾರ ರೈತರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ.

ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚುವ ಪ್ರಯತ್ನ ನಡೆದಿಲ್ಲ. ಹಿಂದಿನ ಸರ್ಕಾರದಲ್ಲಾಗಿರುವ ಅಭಿವೃದ್ಧಿ ಕಾಮಗಾರಿಗೆ ಬಿಲ್ ಪಾವತಿಸಲು ಸಾಧ್ಯವಾಗುತ್ತಿಲ್ಲ. ಯಾವುದೇ ಸಮಸ್ಯೆ ಕುರಿತು ಮುಖ್ಯಮಂತ್ರಿಗಳನ್ನು ಕೇಳಿದರೆ ತಿಳಿದಿಲ್ಲ ಎಂಬ ಉತ್ತರ ನೀಡುತ್ತಾರೆ. ಇವೆಲ್ಲವನ್ನು ಗಮನಿಸಿದರೆ ರಾಜ್ಯದಲ್ಲಿ ಕಾಂಗೆ್ರಸ್ ಸರ್ಕಾರದ ಆಡಳಿತ ಇದೆಯೇ ಅನ್ನಿಸುತ್ತಿಲ್ಲ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT