ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಾಯುಕ್ತ ನೇಮಕಾತಿ: ಸಲಹೆ ಕೇಳಿದ ಸಿಎಂ

Last Updated 6 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ನೂತನ ಲೋಕಾಯುಕ್ತರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿರುವ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ, ವಿಧಾನಸಭೆಯ ಅಧ್ಯಕ್ಷರು, ವಿಧಾನ ಪರಿಷತ್ ಸಭಾಪತಿ ಮತ್ತು ವಿಧಾನಮಂಡಲದ ಉಭಯ ಸದನಗಳ ವಿರೋಧ ಪಕ್ಷದ ನಾಯಕರಿಗೆ ಈ ಸಂಬಂಧ ಸಲಹೆ ನೀಡುವಂತೆ ಕೋರಿ ಪತ್ರ ಬರೆದಿದ್ದಾರೆ.

ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ.ಪಾಟೀಲ್ ಅವರು ನಿವೇಶನ ವಿವಾದದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 19ರಂದು ಲೋಕಾಯುಕ್ತ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. ಅಂದಿನಿಂದ ಈ ಹುದ್ದೆ ಖಾಲಿಯೇ ಉಳಿದಿದೆ.

ನೂತನ ಲೋಕಾಯುಕ್ತರ ನೇಮಕಾತಿ ಪ್ರಕ್ರಿಯೆಗೆ ಮಂಗಳವಾರ ಚಾಲನೆ ನೀಡಿರುವ ಮುಖ್ಯಮಂತ್ರಿ, 15 ದಿನಗಳಲ್ಲಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಯೋಚನೆಯಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT