ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಡ್‌ಶೆಡ್ಡಿಂಗ್: ಪ್ರತಿಭಟನೆ

Last Updated 22 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಶಿವಮೊಗ್ಗ: ವಿದ್ಯುತ್ ಲೋಡ್‌ಶೆಡ್ಡಿಂಗ್ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಎನ್‌ಎಸ್‌ಯುಐ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ರಾಜ್ಯವನ್ನು ಕಗ್ಗತ್ತಲಲ್ಲಿ ದೂಡಿ ರೈತರು ಬೆಳೆ ಬೆಳೆಯಲು ವಿದ್ಯುತ್ ಒದಗಿಸದೇ ತೊಂದರೆ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ರಾಜ್ಯದ ವಿದ್ಯುತ್ ಸಮಸ್ಯೆ ಪರಿಹರಿಸಲು ವಿಫಲವಾಗಿರುವ ಇಂಧನ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಜನಸಾಮಾನ್ಯರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಗಂಭೀರ ಪ್ರಯತ್ನ ಮಾಡದೇ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಭೂಹಗರಣಗಳಂತಹ ಪ್ರಕರಣಗಳಲ್ಲೇ ಮುಳುಗಿ ಹೋಗಿದೆ ಎಂದು ಆರೋಪಿಸಿದ ಕಾರ್ಯಕರ್ತರು, ಅಧಿಕಾರಕ್ಕೆ ಬರುವ ಮೊದಲು ದಿನದ 24ಗಂಟೆ ರೈತರ ಪಂಪಸೆಟ್‌ಗಳಿಗೆ ವಿದ್ಯುತ್, ಗ್ರಾಮೀಣ ಭಾಗದಲ್ಲಿ ತಲಾ 6ಗಂಟೆ ಸತತ ಸಿಂಗಲ್ ಫೇಸ್ ನೀಡುವುದಾಗಿ ಘೋಷಿಸಿ, ಈಗ ತನ್ನ ಹೊಣೆಗಾರಿಕೆಯಿಂದ ನುಣಚಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ದೂರಿದರು.

ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ. ರುದ್ರೇಶ್, ಜಿಲ್ಲಾ ಕಾರ್ಯದರ್ಶಿ ಆರ್. ಸತ್ಯನಾರಾಯಣ, ಪ್ರಧಾನ ಕಾರ್ಯದರ್ಶಿ ಶಿವಮೂರ್ತಿ, ಬಿ.ಎ. ರಮೇಶ್ ಹೆಗ್ಡೆ, ಮುಖಂಡರಾದ ಎಚ್.ಸಿ. ಯೋಗೀಶ್, ಕೆ. ರಂಗನಾಥ್, ಎನ್‌ಎಸ್‌ಯುಐ ಅಧ್ಯಕ್ಷ ಸಿ.ಜಿ. ಮಧುಸೂದನ್ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT