ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಕೀಲರ ಭವನ ಉದ್ಘಾಟನೆ

Last Updated 16 ಡಿಸೆಂಬರ್ 2013, 7:02 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಕಷ್ಟದಲ್ಲಿ ಇರುವವರಿಗೆ ನೆರವಾಗುತ್ತಾ ಶೋಷಿತರಿಗೆ ನ್ಯಾಯ ದೊರಕಿಸುವ ಶ್ರೇಷ್ಠ ಕೆಲಸ ವಕೀಲರದ್ದು ಎಂದು ಕೇಂದ್ರ ಪೆಟ್ರೋಲಿಂ ಸಚಿವ ಡಾ.ಎಂ.ವೀರಪ್ಪ ಮೊಯಿಲಿ ತಿಳಿಸಿದರು.

ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿ ಭಾನುವಾರ ವಕೀಲರ ಭವನ ಉದ್ಘಾಟಿಸಿ ಮಾತನಾಡಿ, ರಾಜಕೀಯ ಪ್ರವೇಶಿಸಿದ ನಂತರ ಹಲವು ಉನ್ನತ ಸ್ಥಾನಗಳನ್ನು ಅಲಂಕರಿಸಿದ್ದರೂ ಹಿಂದೆ ಮುನ್ಸಿಫ್‌ ಕೋರ್ಟ್‌ನಲ್ಲಿ ವಕೀಲನಾಗಿ ಕೆಲಸ ಮಾಡುತ್ತಿದ್ದಾಗ ಸಿಕ್ಕ ನೆಮ್ಮದಿ, ಸಂತೋಷ ಹೆಚ್ಚಿನದು ಎಂದು ಹೇಳಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ.ಎಚ್‌.ತಮ್ಮೇಗೌಡ, ವಿಧಾನ ಪರಿಷತ್‌ ಸದಸ್ಯ ವೈ.ಎ.ನಾರಾಯಣಸ್ವಾಮಿ, ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎಸ್‌.ಎ.ಬೆಳ್ಳುಂಕೆರ, ಮಾಜಿ ಸಚಿವ ಪ್ರೊ.ಮುಮ್ತಾಜ್‌ ಅಲಿಖಾನ್‌, ಜಿಲ್ಲಾಧಿಕಾರಿ ಡಾ.ಆರ್‌.ವಿಶಾಲ್‌, ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಕೆ.ಅಮರನಾರಾಯಣ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶಿವಪ್ರಸಾದ್‌, ರಾಜ್ಯ ವಕೀಲರ ಪರಿಷತ್‌ ಮಾಜಿ ಅಧ್ಯಕ್ಷರಾದ ವೈ.ಆರ್‌.ಸದಾಶಿವರೆಡ್ಡಿ, ಮುನಿಯಪ್ಪ, ಹಿರಿಯ ಸಿವಿಲ್‌ ನ್ಯಾಯಾಧೀಶೆ ರಾಜೇಶ್ವರಿ ಎನ್‌.ಹೆಗ್ಗಡೆ, ಪ್ರಧಾನ ಸಿವಿಲ್‌ ನ್ಯಾಯಾಧೀಶೆ ಎನ್‌.ಪಿ.ಅನಿತಾ, ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶೆ ಎ.ಎಂ.ನಳಿನಿಕುಮಾರಿ, ಮಾಜಿ ಶಾಸಕ ಸಂಪಂಗಿ ಮತ್ತಿತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT