ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರದಿ ಅನುಷ್ಠಾನಕ್ಕೆ ಆಗ್ರಹ

Last Updated 1 ಅಕ್ಟೋಬರ್ 2012, 6:00 IST
ಅಕ್ಷರ ಗಾತ್ರ

ಕೋಲಾರ: ನೀರಾವರಿ ತಜ್ಞ ಪರಮಶಿವಯ್ಯ ವರದಿ ಅನ್ವಯ ಬಯಲು ಸೀಮೆ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಕಲ್ಪಿಸಬೇಕೆಂದು ಆಗ್ರಹಿಸಿ ಗಾಂಧಿಜಯಂತಿ ದಿನದಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ವೃತ್ತದಲ್ಲಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಡೆಸಲು ವಿವಿಧ ಸಂಘ ಸಂಸ್ಥೆಗಳು ಮುಂದಾಗಿವೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್.ಆಂಜನೇಯರೆಡ್ಡಿ ಹೇಳಿದರು.

ನಗರದ ಬಂಗಾರಪೇಟೆ ವೃತ್ತದಲ್ಲಿ ಶನಿವಾರ ಮಧ್ಯಾಹ್ನ ಅನಿರ್ಧಿಷ್ಟಾವಧಿ ಸತ್ಯಾಗ್ರಹ ಕುರಿತಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಂತರ್ಜಲ ಕುಸಿತದಿಂದ ತತ್ತರಿಸುತ್ತಿರುವ ಮತ್ತು ನೀರಾವರಿ  ಯೋಜನೆಗಳ ಅನುಷ್ಟಾನದಲ್ಲಿ ನಿರ್ಲಕ್ಷಕ್ಕೆ ತುತ್ತಾಗಿರುವ ಈ ಭಾಗವನ್ನು ಸಂವಿಧಾನದ ಕಲಂ 371ರಡಿ ವಿಶೇಷ ವಲಯ ಗುರುತಿಸಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಲಾಗುವುದು ಎಂದರು.

ಅಧ್ಯಕ್ಷ ಹುಲ್ಕೂರು ಹರಿಕುಮಾರ್, ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೆ.ಎನ್.ರವೀಂದ್ರಕುಮಾರ್, ಚಿನ್ನಿ ಅನಂತ್, ನಾರಾಯಣಸ್ವಾಮಿ, ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಲ್.ಇ.ಕೃಷ್ಣೇಗೌಡ, ಜಯಣ್ಣ, ಕೆ.ಬಿ.ಶ್ರೀನಿವಾಸ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT