ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರಿಷ್ಠರ ನಿರ್ಣಯಕ್ಕೆ ಬದ್ಧರಾಗಿ

Last Updated 7 ಫೆಬ್ರುವರಿ 2011, 9:45 IST
ಅಕ್ಷರ ಗಾತ್ರ

ಯಾದಗಿರಿ: ಕಾಂಗ್ರೆಸ್ ಪಕ್ಷ ದೊಡ್ಡ ಸಾಗರವಿದ್ದಂತೆ. ಈ ಪಕ್ಷದಿಂದ ಬೆಳೆಯಲು ಸಾಕಷ್ಟು ಅವಕಾಶಗಳಿವೆ. ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವುದರ ಜೊತೆಗೆ ಪಕ್ಷದಲ್ಲಿ ನಿಷ್ಠೆ ಇರಬೇಕು ಎಂದು ಜಿ.ಪಂ. ನೂತನ ಅಧ್ಯಕ್ಷೆ ಅನಸೂಯಾ ಬೋರಬಂಡ್ ಸಲಹೆ ಮಾಡಿದರು. ಭಾನುವಾರ ನಗರದ ಕಾಂಗ್ರೆಸ್ ಕಚೇರಿಯಲ್ಲಿ ತಾ.ಪಂ. ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಶ್ರಮಕ್ಕೆ ಫಲ ಇದ್ದೇ ಇದೆ. ಪಕ್ಷ ಹಾಗೂ ನಮ್ಮನ್ನು ಆಯ್ಕೆ ಮಾಡಿದ ಮತದಾರರಿಗೆ ಸೌಲಭ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು ಎಂದ ಅವರು, ತಾ.ಪಂ. ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯ ವಿಷಯದಲ್ಲಿ ಪಕ್ಷದ ಜಿಲ್ಲೆಯ ವರಿಷ್ಠರು, ಶಾಸಕರು ಅಭಿಪ್ರಾಯಕ್ಕೆ ಬದ್ಧರಾಗಿ ಎಂದು ಹೇಳಿದರು. ಯಾವುದೇ ಕಾರಣಕ್ಕೂ ಪಕ್ಷದಲ್ಲಿ ಮನಸ್ತಾಪ ಮಾಡಿಕೊಳ್ಳಬಾರದು. ಪಕ್ಷದ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರ ಮನಸ್ಸಿಗೆ ನೋವಾಗದಂತೆ ಕೆಲಸ ಮಾಡಬೇಕು ಎಂದು ತಿಳಿಸಿದರು.

ಗುರುಮಠಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಾಯಬಣ್ಣ ಬೋರಬಂಡ್, ಶ್ರೀನಿವಾಸರೆಡ್ಡಿ ಕಂದಕೂರ ಮಾತನಾಡಿದರು. ತಾ.ಪಂ. ನೂತನ ಸದಸ್ಯರನ್ನು ಜಿ.ಪಂ. ಅಧ್ಯಕ್ಷೆ ಅನಸೂಯಾ ಬೋರಬಂಡ್ ಸನ್ಮಾನಿಸಿದರು. ಸೈದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಶ್ವನಾಥ ನೀಲಳ್ಳಿ, ಜಿ. ಭೀಮರಾವ, ಶರಣಗೌಡ ಅರಕೇರಿ, ಸಿದ್ಧಲಿಂಗರೆಡ್ಡಿ ಉಳ್ಳೆಸುಗೂರು, ಜಗನ್ನಾಥರೆಡ್ಡಿ ಸಾಂಬ್ರ, ಮಹಿಪಾಲರೆಡ್ಡಿ, ಬಸಣ್ಣ ದೇವರಳ್ಳಿ, ಭೀಮರಾಯ ಠಾಣಗುಂದಿ, ಸತ್ಯನಾರಾಯಣ ಗೌರ, ರವಿ ಮಾಲಿಪಾಟೀಲ ಮುಂತಾದವರು ಹಾಜರಿದ್ದರು. ಶಿವರಾಜ ಜಕಾತಿ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಸುರೇಶ ಜೈನ್ ಸ್ವಾಗತಿಸಿ, ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT