ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರ್ಷಾಂತ್ಯಕ್ಕೆ ಕಾಮಗಾರಿ ಪೂರ್ಣ: ಮುನಿಯಪ್ಪ

Last Updated 11 ಜನವರಿ 2012, 7:30 IST
ಅಕ್ಷರ ಗಾತ್ರ

ಮಂಡ್ಯ: ಬೆಂಗಳೂರು- ಮಂಡ್ಯ ನಡುವಿನ ಜೋಡಿ ರೈಲು ಮಾರ್ಗದ ಅಭಿವೃದ್ಧಿ ಕಾಮಗಾರಿ ಡಿಸೆಂಬರ್ 2012ಕ್ಕೆ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಮುನಿಯಪ್ಪ ಮಂಗಳವಾರ ಹೇಳಿದರು.

ಬೆಂಗಳೂರು- ಮೈಸೂರು ನಡುವಿನ ಈ ಯೋಜನೆಗೆ ಉಭಯ ನಗರಗಳ ನಡುವೆ ಒಟ್ಟು 288 ಎಕರೆ ಭೂಮಿ ಅಗತ್ಯವಿದೆ. ಒಟ್ಟು ರೂ. 530 ಕೋಟಿ ಅಂದಾಜು ವೆಚ್ಚದ ಯೋಜನೆ ಇದಾಗಿದೆ. ಕಾಮಗಾರಿ 2013ರ ಅಂತ್ಯಕ್ಕೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಬೆಂಗಳೂರು- ಮಂಡ್ಯ ನಡುವೆ ಸೇತುವೆಗಳ ನಿರ್ಮಾಣ, ಹಳಿ ಅಭಿವೃದ್ಧಿ, ವಿದ್ಯುದ್ದೀಕರಣ ಸೇರಿದಂತೆ ಮತ್ತಿತರ ಕಾಮಗಾರಿಗಳು ಪ್ರಗತಿ ಯಲ್ಲಿವೆ. ವರ್ಷಾಂತ್ಯದ ವೇಳೆಗೆ ಬಳಕೆಗೆ ಸಿದ್ಧವಾಗಲಿದೆ ಎಂದರು.

ಆದರೆ, ಮಂಡ್ಯ- ಮೈಸೂರು ನಡುವೆ ಇನ್ನೂ 88 ಎಕರೆ ಭೂಮಿಯನ್ನು ಸರ್ಕಾರ ರೈಲ್ವೆ ಇಲಾಖೆ ವಶಕ್ಕೆ ಒಪ್ಪಿಸಬೇಕಿದೆ. ಶ್ರೀರಂಗಪಟ್ಟಣದ ಪಾರಂಪರಿಕ ಸ್ಥಳ ಮದ್ದಿನ ಮನೆ ಸೇರಿದಂತೆ ಮೂರು ಕಡೆ ಭೂಮಿ ಪಡೆಯುವ ಸಮಸ್ಯೆ ಇದೆ. ಅದು ಬಗೆಹರಿದ ಬಳಿಕ ಕಾಮಗಾರಿ ಪೂರ್ಣವಾಗಲಿದೆ ಎಂದರು.

ಈ ವಿಷಯದಲ್ಲಿ ರಾಜ್ಯ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಹೇಳಲಾಗದು. ರೈತರ ವಿರೋಧದ ಹಿನ್ನೆಲೆಯಲ್ಲಿ ಭೂ ಸ್ವಾಧೀನ ವಿಳಂಬ ಆಗಿರಬಹುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT