ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಸತಿ ಒದಗಿಸಲು ಆಗ್ರಹ

Last Updated 19 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಮಾಗಡಿ: ತಾಲ್ಲೂಕಿನ ನೇತೇನಹಳ್ಳಿ ಗ್ರಾಮದಲ್ಲಿ ವಾಸವಾಗಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಬಡವರಿಗೆ ಗಾಮ ಪಂಚಾಯಿತಿ ವತಿಯಿಂದ ಯಾವುದೇ ಸವಲತ್ತುಗಳನ್ನು ನೀಡಿಲ್ಲ ಎಂದು ತಾಲ್ಲೂಕು ದಲಿತ ಸಂಘರ್ಷ ಸಮಿತಿ ಆರೋಪಿಸಿದೆ.

ನೇತೇನಹಳ್ಳಿಯಲ್ಲಿ ಕಳೆದ ಇಪ್ಪತ್ತು ವರ್ಷಗಳಿಂದಲೂ ಕಲ್ಲು ಒಡೆಯುವ ಕೂಲಿ ಕೆಲಸ ಮಾಡಿಕೊಂಡಿರುವ ಭೋವಿ ಜನಾಂಗ ಮತ್ತು ರೇಷ್ಮೆ ಹುರಿ ಕಾರ್ಖಾನೆಗಳಲ್ಲಿ ದಿನಗೂಲಿ ಕೆಲಸ ಮಾಡಿಕೊಂಡಿರುವ ಶಿಳ್ಳೇಕ್ಯಾತ ಮತ್ತು ದೊಂಬಿದಾಸರ ಕುಟುಂಬಗಳಿಗೆ ಪಂಚಾಯಿತಿ ವತಿಯಿಂದ ಯಾವುದೇ ಸವಲತ್ತುಗಳನ್ನು ನೀಡಿಲ್ಲ. ಈ ಕುಟುಂಬದವರಿಗೆ ವಸತಿ ಸೌಲಭ್ಯವನ್ನು ಜೋಪಡಿಯಲ್ಲಿ ವಾಸವಾಗಿದ್ದಾರೆ.

ತಾಲ್ಲೂಕು ಪಂಚಾಯಿತಿ ವತಿಯಿಂದ ನೇತೇನಹಳ್ಳಿ ಗಾಮ ಪಂಚಾಯಿತಿಗೆ 2010-11ನೇ ಸಾಲಿನಲ್ಲಿ 127 ಬಸವ ಇಂದಿರಾ ಆವಾಸ್ ಯೋಜನೆಯಡಿ ಮನೆಗಳನ್ನು ಮಂಜೂರು ಮಾಡಿರುವುದಾಗಿ ಅಧಿಕಾರಿಗಳು ತಿಳಿಸುತ್ತಾರೆ. ಆದರೆ ಬಡವರಿಗೆ ಮನೆ ನೀಡದೇ ಹಣವಂತರಿಗೆ ಸರ್ಕಾರದಿಂದ ಬರುವ ಮನೆಗಳನ್ನು ನೀಡಿದ್ದಾರೆ ಎಂದು ದಲಿತ ಸಂರ್ಘಸ ಸಮಿತಿ ಆರೋಪಿಸಿದೆ. ಬಡವರಿಗೆ ಮನೆ ಮಂಜೂರು ಮಾಡದಿದ್ದರೆ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕುವುದಾಗಿ ಸಮಿತಿ ಎಚ್ಚರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT