ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಸತಿ ಶಾಲೆಗೆ ಕೌನ್ಸೆಲಿಂಗ್ ಆರಂಭ

Last Updated 12 ಮೇ 2012, 19:30 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಶನಿವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಮಟ್ಟದ ಕೌನ್ಸೆಲಿಂಗ್ ನಡೆಯಿತು.

ಅಂಗವಿಕಲರು, ದುರ್ಬಲ ವರ್ಗದವರು ಮತ್ತು ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ ನಡೆಸಲಾಯಿತು. ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಭಾನುವಾರ ಕೌನ್ಸೆಲಿಂಗ್ ನಡೆಯಲಿದೆ.

ಬೆಳಿಗ್ಗೆ 9ರಿಂದ ಸಂಜೆ 5ರ ವರೆಗೆ ನಡೆದ ಕೌನ್ಸೆಲಿಂಗ್‌ಗೆ ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ವಿದ್ಯಾರ್ಥಿಗಳು ಪೋಷಕರೊಂದಿಗೆ ಆಗಮಿಸಿದ್ದರು. ಅಗತ್ಯ ಮಾಹಿತಿ ಮತ್ತು ದಾಖಲೆಪತ್ರಗಳನ್ನು ತಂದಿದ್ದ ಪೋಷಕರು ಅಧಿಕಾರಿಗಳಿಗೆ ಪ್ರದರ್ಶಿಸಿ, ಪ್ರವೇಶ ಪಡೆದರು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಅಗತ್ಯ ಮಾಹಿತಿ ಮತ್ತು ಮಾರ್ಗದರ್ಶನ ನೀಡಿದರು.

`ಮೊರಾರ್ಜಿ ದೇಸಾಯಿ ಮತ್ತು ರಾಣಿ ಚೆನ್ನಮ್ಮ ವಸತಿ ಶಾಲೆಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಕೆಲ ದಿನಗಳ ಹಿಂದೆ ಪ್ರವೇಶ ಪರೀಕ್ಷೆ ನಡೆಸಲಾಗಿತ್ತು. ಅಂಗವಿಕಲರು ಮತ್ತು ಪರಿಶಿಷ್ಟ ಜಾತಿ ವಿಭಾಗದಲ್ಲಿ ಒಟ್ಟು 350 ವಿದ್ಯಾರ್ಥಿಗಳು ಕೌನ್ಸೆಲಿಂಗ್ ಪ್ರಕ್ರಿಯೆಗೆ ಆಯ್ಕೆಯಾಗಿದ್ದರು. ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ರ‌್ಯಾಂಕಿಂಗ್ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದೆ~ ಎಂದು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ದೇವರಾಜ್ `ಪ್ರಜಾವಾಣಿ~ಗೆ ತಿಳಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT