ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಸ್ತ್ರಬ್ಯಾಂಕ್ ಸ್ಥಾಪಿಸಲು ಆಗ್ರಹ

Last Updated 14 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬಾಗಲಕೋಟೆ: ಸಂಕಷ್ಟದಲ್ಲಿರುವ ನೇಕಾರರ ಹಿತ ಕಾಪಾಡುವ ಉದ್ದೇಶದಿಂದ ರಾಜ್ಯ ಸರ್ಕಾರ `ವಸ್ತ್ರ ಬ್ಯಾಂಕ್~ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಡಿ. ಲಕ್ಷ್ಮಿನಾರಾಯಣ ಮಂಗಳವಾರ ಇಲ್ಲಿ ಆಗ್ರಹಿಸಿದರು.

ರಾಜ್ಯದ ನೇಕಾರರು ತಯಾರಿಸುವ ವಸ್ತ್ರಗಳ ಮಾರಾಟಕ್ಕೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಈ ಬಾರಿಯ ಬಜೆಟ್‌ನಲ್ಲಿ ಆವರ್ತನಿಧಿ ಮೀಸಲಿಡಬೇಕು ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

ರಾಜ್ಯದಲ್ಲಿ 55 ಲಕ್ಷ ನೇಕಾರರಿದ್ದರೂ ಜನಸಂಖ್ಯೆಗೆ ಅನುಗುಣವಾಗಿ ಇದುವರೆಗೂ ಸರಿಯಾದ ರಾಜಕೀಯವಾಗಿ ಪ್ರಾತಿನಿಧ್ಯ ದೊರೆತಿಲ್ಲ. ನೇಕಾರ ಸಮುದಾಯದ ಸಂಘಟನೆ ಉದ್ದೇಶದಿಂದ ಮತ್ತು ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಪಡೆದುಕೊಳ್ಳುವ ಉದ್ದೇಶದಿಂದ ಶೀಘ್ರದಲ್ಲೇ ನೇಕಾರ ಸಮುದಾಯದ ಮಹಾ ಸಮ್ಮೇಳನವನ್ನು ಬೆಂಗಳೂರಿನಲ್ಲಿ ಏರ್ಪಡಿಸಲಾಗುವುದು ಎಂದು ತಿಳಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT