ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಜಪೇಯಿ ಚಿತ್ರದ ಚೀಲ ವಿತರಣೆ ನಿಲ್ಲಿಸಲು ಸೂಚನೆ

Last Updated 7 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಶಿಮ್ಲಾ (ಪಿಟಿಐ): ಹಿಮಾಚಲ ಪ್ರದೇಶ ವಿಧಾನಸಭೆಗೆ  ಚುನಾವಣೆ ಘೋಷಣೆಯಾಗಿರುವ ಕಾರಣ ರಾಜ್ಯ ಬಿಜೆಪಿ ಸರ್ಕಾರವು ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ ಗ್ರಾಹಕರಿಗೆ ಉಚಿತವಾಗಿ ಪೂರೈಸುತ್ತಿದ್ದ ಚೀಲಗಳ ವಿತರಣೆ ನಿಲ್ಲಿಸುವಂತೆ ರಾಜ್ಯ ಚುನಾವಣಾ ಆಯೋಗ ಸರ್ಕಾರಕ್ಕೆ ಸೂಚಿಸಿದೆ. 

ಈ ಚೀಲಗಳಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಚಿತ್ರವಿದ್ದು, ಚುನಾವಣಾ ಆಯೋಗಕ್ಕೆ ದೂರು ಬಂದಿದೆ. ಸರ್ಕಾರ 16 ಲಕ್ಷ ಪಡಿತರದಾರರಿಗೆ ಉಚಿತ ಚೀಲಗಳನ್ನು ವಿತರಿಸುವ ಕಾರ್ಯಕ್ರಮವನ್ನು ಆ. 15ರಿಂದ ಹಮ್ಮಿಕೊಂಡಿತ್ತು. ಇನ್ನು ಮುಂದೆ ಯಾವುದೇ ರಾಜಕೀಯ ನಾಯಕರ ಚಿತ್ರವುಳ್ಳ ಚೀಲಗಳನ್ನು ಪಡಿತರ ವಿತರಣಾ ಇಲಾಖೆ ವಿತರಿಸುವಂತಿಲ್ಲ ಎಂದು ಆಯೋಗ ನಿರ್ದೇಶಿಸಿದೆ.

 ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಡಿ ಚೀಲಗಳ ವಿತರಣೆ ಬಗ್ಗೆ ದೂರು ಸ್ವೀಕರಿಸಲಾಗಿದೆ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT