ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಣಿಜ್ಯ ಮಳಿಗೆಯಲ್ಲಿ ಬೆಂಕಿ ಆಕಸ್ಮಿಕ

Last Updated 7 ಜನವರಿ 2012, 19:50 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಬ್ರಿಗೇಡ್ ರಸ್ತೆಯ ವಾಣಿಜ್ಯ ಮಳಿಗೆ ಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದಾಗಿ ಅಗ್ನಿ ದುರಂತ ಸಂಭವಿಸಿದ ಘಟನೆ ಶನಿವಾರ ರಾತ್ರಿ ಸಂಭವಿಸಿದೆ.

ಬಟ್ಟೆ ಅಂಗಡಿಯೊಂದರಲ್ಲಿ ರಾತ್ರಿ ಸುಮಾರು 11 ಗಂಟೆಗೆ ಈ ಅನಾಹುತ ಸಂಭವಿಸಿದೆ. ವಿಷಯ ತಿಳಿಯುತ್ತಿದ್ದಂತೆ ಕೂಡಲೆ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಏಳು ವಾಹನಗಳಲ್ಲಿ ಒಂದು ಗಂಟೆಯ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು.

ಘಟನೆಯಲ್ಲಿ ಬಟ್ಟೆಗಳು ಸುಟ್ಟು ಹೋಗಿದ್ದು, ಯಾವುದೇ ಸಾವು- ನೋವುಗಳು ಸಂಭವಿಸಿಲ್ಲ. ಅಶೊಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT