ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಣಿಜ್ಯ ಸಂಬಂಧ ವೃದ್ಧಿ

Last Updated 24 ಜುಲೈ 2013, 19:59 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): `ಭಾರತ-ಅಮೆರಿಕ ವಾಣಿಜ್ಯ ಸಂಬಂಧ ಮತ್ತಷ್ಟು ಗಟ್ಟಿಯಾಗಬೇಕು' ಎಂದು ಅಮೆರಿಕದ ಉಪಾಧ್ಯಕ್ಷ ಜೋ ಬಿಡೆನ್ ಬುಧವಾರ ಹೇಳಿದ್ದಾರೆ.

`ಎರಡೂ ದೇಶಗಳು ಸರಿಯಾದ ಆಯ್ಕೆ ಮಾಡಿದಲ್ಲಿ ವಾಣಿಜ್ಯ ಸಂಬಂಧ ಐದು ಪಟ್ಟು ಬೆಳೆಯುತ್ತದೆ' ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.

ಬಾಂಬೆ ಷೇರು ವಿನಿಮಯ ಕೇಂದ್ರದಲ್ಲಿ ಅಮೆರಿಕ-ಭಾರತ ಸಹಭಾಗಿತ್ವದ ಬಗ್ಗೆ ಉಪನ್ಯಾಸ ನೀಡಿದ ಅವರು, `ಭಾರತವು ಕಳೆದ ದಶಕದಲ್ಲಿ ತ್ವರಿತವಾಗಿ ಪ್ರಗತಿ ಹೊಂದಿದೆ. ಉದಾರೀಕರಣದ ಕುರಿತು 1991ರಲ್ಲಿ ತೆಗೆದುಕೊಂಡ ದಿಟ್ಟ ನಿಲುವೇ ಈ ಪ್ರಗತಿಗೆ ಕಾರಣ 'ಎಂದರು.

ಭಯೋತ್ಪಾದನೆ ಬಗ್ಗೆ ಮಾತನಾಡುತ್ತಾ, `ಎರಡೂ ದೇಶಗಳು ಈ ಪಿಡುಗಿಗೆ ಬಲಿಯಾಗುತ್ತಿವೆ. ಭಯೋತ್ಪಾದನೆ ನಿಗ್ರಹಕ್ಕೆ ಪರಸ್ಪರ ಸಹಕಾರವನ್ನು ಬಲಪಡಿಸಬೇಕಿದೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT