ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾರಸುದಾರರ ಕೈಸೇರಿದ ಕಳವು ವಸ್ತುಗಳು

Last Updated 4 ಅಕ್ಟೋಬರ್ 2011, 5:45 IST
ಅಕ್ಷರ ಗಾತ್ರ

ಬಳ್ಳಾರಿ: ಜಿಲ್ಲೆಯಾದ್ಯಂತ ಕಳೆದ ಮೂರು ತಿಂಗಳ ಅವಧಿಯಲ್ಲಿ ಸಂಭವಿಸಿರುವ ದರೋಡೆ, ಸುಲಿಗೆ, ಕಳ್ಳತನ ಮತ್ತಿತರ ಪ್ರಕರಣಗಳನ್ನು ಪತ್ತೆ ಮಾಡಿ,  ವಶಪಡಿಸಿಕೊಳ್ಳಲಾದ ಅಮೂಲ್ಯ ವಸ್ತುಗಳನ್ನು ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ವಾರಸುದಾರರಿಗೆ ಒಪ್ಪಿಸಲಾಯಿತು.

ಜುಲೈ 1ರಿಂದ ಸೆ. 30ರವರೆಗೆ ನಡೆದಿದ್ದ 92 ಪ್ರಕರಣಗಳ ಪೈಕಿ 67 ಪ್ರಕರಣಗಳನ್ನು ಪತ್ತೆ ಮಾಡಿ, 85 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಅವರಿಂದ ಒಟ್ಟು 1.06 ಕೋಟಿ ಮೌಲ್ಯದ ಚಿನ್ನ, ಬೆಳ್ಳಿ ಆಭರಣ, ನಗದು, ವಾಹನಗಳು ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಡಾ.ಚಂದ್ರಗುಪ್ತ ತಿಳಿಸಿದರು.

ಒಟ್ಟು ರೂ 1.81 ಕೋಟಿ ಮೌಲ್ಯದ ವಸ್ತುಗಳು ಕಳವಾಗಿದ್ದು, ಆ ಪೈಕಿ 1.06 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡು, ವಾರಸುದಾರರಿಗೆ ನೀಡಲಾಗಿದೆ ಎಂದು ಅವರು ಹೇಳಿದರು.

ಬೈಕ್‌ಗಳು, ಟ್ರ್ಯಾಕ್ಟರ್, ಚಿನ್ನದ ಆಭರಣ, ಕಬ್ಬಿಣ, ನಗದು, ಮೊಬೈಲ್‌ಗಳು ಒಳಗೊಂಡಂತೆ ಎಲ್ಲ ವಸ್ತುಗಳನ್ನು ನ್ಯಾಯಾಲಯದ ಆದೇಶದಂತೆ ಸುರಕ್ಷಿತವಾಗಿ ವಾರಸುದಾರರಿಗೆ ಒಪ್ಪಿಸಲಾಗಿದೆ. ಇನ್ನೂ ಕೆಲವರ ವಸ್ತುಗಳನ್ನು ನ್ಯಾಯಾಲಯದ ಆದೇಶ ಬಂದ ನಂತರ ನೀಡಲಾಗುವುದು ಎಂದು ಅವರು ವಿವರಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಶೇಖರ ಕ್ಯಾತನ್, ಡಿವೈಎಸ್‌ಪಿ ಬಾಬು ಕೋಳೇಕರ, ಸಿಪಿಐಗಳಾದ ಗಿರೀಶ ಭೋಜಣ್ಣವರ್,ಭಾಸ್ಕರ ರೈ,  ಮಲ್ಲೇಶ ದೊಡ್ಡಮನಿ, ಪಿಎಸ್‌ಐಗಳಾದ ಚಿದಾನಂದ, ನಜೀರ್ ಅಹಮದ್, ಫಿರೋಜ್ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT