ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಲಿಬಾಲ್: ಪೋಸ್ಟಲ್‌ಗೆ ಮಣಿದ ಕೆಎಸ್‌ಪಿ

Last Updated 5 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಹೊಂದಾಣಿಕೆಯ ಆಟವಾಡಿದ ಪೋಸ್ಟಲ್ ತಂಡದವರು ಇಲ್ಲಿ ನಡೆಯುತ್ತಿರುವ ರಾಜ್ಯ `ಎ~ ಡಿವಿಷನ್ ವಾಲಿಬಾಲ್ ಲೀಗ್ ಚಾಂಪಿಯನ್‌ಷಿಪ್‌ನ ಪಂದ್ಯದಲ್ಲಿ ಜಯ ಸಾಧಿಸಿದರು.

ಕಂಠೀರವ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಪೋಸ್ಟಲ್ 25-23, 25-27, 25-18, 25-21 ರಲ್ಲಿ ಕರ್ನಾಟಕ ರಾಜ್ಯ ಪೊಲೀಸ್ (ಕೆಎಸ್‌ಪಿ) ತಂಡವನ್ನು ಮಣಿಸಿತು. ಒಂದೂವರೆ ಗಂಟೆಯ ಕಾಲ ನಡೆದ ಈ ಪೈಪೋಟಿಯಲ್ಲಿ ಎ. ಕಾರ್ತಿಕ್ ಮತ್ತು ವಿನೋದ್ ಕಿಣಿ ವಿಜಯಿ ತಂಡದ ಪರ ಉತ್ತಮ ಪ್ರದರ್ಶನ ನೀಡಿದರು.

ಸೋಮವಾರ ನಡೆಯುವ ಪಂದ್ಯಗಳಲ್ಲಿ ಎಎಸ್‌ಸಿ- ಪೋಸ್ಟಲ್ ಮತ್ತು ಬಿಎಸ್‌ಎನ್‌ಎಲ್- ಎಲ್‌ಐಸಿ ತಂಡಗಳು ಪೈಪೋಟಿ ನಡೆಸಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT