ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಹನ ನಿಲುಗಡೆ ನೀತಿ ಕೈಬಿಡಲು ಒತ್ತಾಯ

Last Updated 21 ಸೆಪ್ಟೆಂಬರ್ 2013, 19:31 IST
ಅಕ್ಷರ ಗಾತ್ರ

ಬೆಂಗಳೂರು: ‘ಬಿಬಿಎಂಪಿಯು ವಾಹನ ನಿಲುಗಡೆ ಶುಲ್ಕ ಹೆಚ್ಚಿಸುವ ಮೂಲಕ ಸಾರ್ವಜನಿಕರ ದುಡ್ಡನ್ನು ಹಗಲು ದರೋಡೆ ಮಾಡಲು ಮುಂದಾಗಿದೆ’ ಎಂದು ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಲಕ್ಷ್ಮೀ­ನಾರಾಯಣ ನಾಗವಾರ ದೂರಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಬಿಎಂಪಿಯು ವಾಹನ ನಿಲುಗಡೆ ಶುಲ್ಕ ಹೆಚ್ಚಿಸುವ ಪ್ರಸ್ತಾವಕ್ಕೆ ಚರ್ಚೆಯಿಲ್ಲದೆ ಒಪ್ಪಿಗೆ ನೀಡಿರುವುದು  ಸರಿಯಲ್ಲ’ ಎಂದರು.

‘ಭೂಸಾರಿಗೆ ನಿರ್ದೇಶನಾಲಯದ ಹಲವು ಶಿಫಾರಸುಗಳು ಬಿಬಿಎಂಪಿ ಸಭೆ ಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಚರ್ಚೆಯಾಗಬೇಕಿತ್ತು. ಆದರೆ, ವಾಹನ ನಿಲುಗಡೆ ವಿಷಯಕ್ಕೆ ಯಾವುದೇ ಚರ್ಚೆ ಯಿಲ್ಲದೆ ಒಪ್ಪಿಗೆ ಸೂಚಿಸಿರುವುದು  ಹಲವು ಅನುಮಾನಕ್ಕೆ ಎಡೆಮಾಡಿ ಕೊಟ್ಟಿದೆ. ಬಿಬಿಎಂಪಿಯಲ್ಲಿನ ಬಿಜೆಪಿ ಸದಸ್ಯರು ದಲ್ಲಾಳಿಗಳಿಗೆ ಅನುಕೂಲ ಮಾಡಿಕೊಡಲು ಹೊಸ ವಾಹನ ನಿಲುಗಡೆ ನೀತಿಯನ್ನು ಜಾರಿಗೆ ತರಲು ಉತ್ಸುಕರಾಗಿದ್ದಾರೆ’ ಎಂದು ಅವರು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT