ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಹನ ಪ್ರವೇಶ ಶುಲ್ಕ: ಪ್ರತಿಭಟನೆ

Last Updated 1 ಫೆಬ್ರುವರಿ 2011, 8:40 IST
ಅಕ್ಷರ ಗಾತ್ರ

ಬೆಳಗಾವಿ: ಕಂಟೋನ್ಮೆಂಟ್ ಪ್ರದೇಶ ಅಭಿವೃದ್ಧಿ ಮಂಡಳಿ ನಗರದಲ್ಲಿ ವಾಣಿಜ್ಯ ಸಂಬಂಧಿ ವಾಹನಗಳಿಂದ ಪ್ರವೇಶ ಶುಲ್ಕ ಸಂಗ್ರಹಿಸಲು ತೆಗೆದುಕೊಂಡಿರುವ ನಿರ್ಧಾರವನ್ನು ವಿರೋಧಿಸಿ ಕರವೇ ಕಾರ್ಯಕರ್ತರು ಸೋಮವಾರ ಧರಣಿ ನಡೆಸಿದರು.ಕಂಟೋನ್ಮೆಂಟ್ ನಿರ್ಧಾರ ಕಾನೂನು ಬಾಹಿರವಾಗಿದ್ದು, ಕೂಡಲೇ ಶುಲ್ಕ ಸಂಗ್ರಹಿಸುವ ನಿರ್ಧಾರವನ್ನು ಕೈಬಿಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕರವೇ ಜಿಲ್ಲಾ ಘಟಕದ ಅಧ್ಯಕ್ಷ ರಾಜೀವ ಟೋಪಣ್ಣವರ, ಜಾರ್ಖಂಡ್ ರಾಜ್ಯದ ರಾಮನಗರದ ಕಂಟೋನ್ಮೆಂಟ್ ಮಂಡಳಿಯ ನಿರ್ಧಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ವಾಹನಗಳಿಂದ ಪ್ರವೇಶ ಶುಲ್ಕ ಸಂಗ್ರಹಿಸುವ ಅಧಿಕಾರ ಕಂಟೋನ್ಮೆಂಟ್ ಮಂಡಳಿಗಳಿಗೆ ಇಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ. ಆದರೂ ಬೆಳಗಾವಿಯ ಕಂಟೋನ್ಮೆಂಟ್ ಬೋರ್ಡ್ ಮತ್ತೊಂದು ದುಸ್ಸಾಹಸಕ್ಕೆ ಕೈ ಹಾಕಿದೆ ಎಂದು ಆರೋಪಿಸಿದರು.

ನಗರದಲ್ಲಿ ಈಗಾಗಲೇ ವಾಹನ ಜನದಟ್ಟನೆ ಹೆಚ್ಚಾಗುತ್ತಿದೆ. ಖಾನಾಪುರ ರಸ್ತೆಯಲ್ಲಿ ದಿನನಿತ್ಯ ಟ್ರಾಫಿಕ್ ಕಿರಿಕಿರಿ. ಇಂಥ ಸಂದರ್ಭದಲ್ಲಿ ಕಂಟೋನ್ಮೆಂಟ್ ಬೋರ್ಡ್ ಸುಮಾರು 6 ಕಡೆಗಳಲ್ಲಿ ಪ್ರವೇಶ ಶುಲ್ಕವನ್ನು ಸಂಗ್ರಹಿಸಲು ನಾಕಾ ಪ್ರಾರಂಭಿಸಿದರೆ ಸಮಸ್ಯೆ ಮತ್ತಷ್ಟು ಹೆಚ್ಚಾಗುತ್ತದೆ. ಯಾವುದೇ ಕಾರಣಕ್ಕೂ ಶುಲ್ಕ ಸಂಗ್ರಹಣೆಗೆ ಅವಕಾಶ ನೀಡುವದಿಲ್ಲ ಎಂದು ಅವರು ಎಚ್ಚರಿಕೆ ನೀಡಿದರು.

ಪ್ರವೇಶ ಶುಲ್ಕ ಸಂಗ್ರಹಣೆಯ ವಿಚಾರವನ್ನು ಕೂಡಲೇ ಕೈಬಿಡಬೇಕು, ಬೆಳಗಾವಿಯ ಐತಿಹಾಸಿಕ ಕೋಟೆ ಅಭಿವೃದ್ಧಿಗೆ ಅನುಮತಿ ನೀಡಬೇಕು, ಕೋಟೆ ಆವರಣದಲ್ಲಿರುವ ವಸ್ತು ಸಂಗ್ರಹಾಲಯದ ಅಭಿವೃದ್ಧಿಗೆ ಅನುಮತಿ ಕೊಡಬೇಕು. ಕ್ಯಾಂಪ್ ಪ್ರದೇಶದಲ್ಲಿ ಕಂಟೋನ್ಮೆಂಟ್ ಹೆಸರು ಹೇಳಿಕೊಂಡು ಬೀದಿ ವ್ಯಾಪಾರಿಗಳಿಂದ ಹಫ್ತಾ ವಸೂಲಿ ಮಾಡಲಾಗುತ್ತಿದ್ದು, ಕೂಡಲೇ ಅದನ್ನು ನಿಲ್ಲಿಸಬೇಕು. ಈ ಪ್ರದೇಶದಲ್ಲಿ ಸ್ವಚ್ಛತಾ ಕಾಮಗಾರಿಗಳನ್ನು ಹೆಚ್ಚಿಸಬೇಕು, ಅಲ್ಲಿನ ತರಕಾರಿ ಮಾರುಕಟ್ಟೆಯನ್ನು ತೆರವುಗೊಳಿಸಿ ಟ್ರಾಫಿಕ್ ಸಮಸ್ಯೆಯನ್ನು ನಿವಾರಿಸಬೇಕು ಎಂದು ಪ್ರತಿಭಟನಾಕಾರರು ಮನವಿ ಮಾಡಿಕೊಂಡರು.

ಉಪಾಧ್ಯಕ್ಷ ಮಹಾದೇವ ತಳವಾರ, ಪ್ರಧಾನ ಕಾರ್ಯದರ್ಶಿ ಗಣೇಶ ರೋಕಡೆ, ದೀಪಕ ಗುಡಗನಟ್ಟಿ, ಸುರೇಶ ಗವನ್ನವರ, ಭೂಪಾಲ ಅತ್ತು, ಶಾಂತಾ ಟಿಸಿ, ಶಾಂತಾ ಹಣಬರ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT