ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಂಡೀಸ್ ಆಟಗಾರರಿದ್ದ ಹೋಟೆಲ್‌ಗೆ ಪ್ರವೇಶಿಸಿದ ಯುವತಿಯರ ಬಂಧನ

Last Updated 3 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಕೊಲಂಬೊ (ಪಿಟಿಐ): ವೆಸ್ಟ್‌ಇಂಡೀಸ್ ಕ್ರಿಕೆಟ್ ತಂಡದ ಆಟಗಾರರಿದ್ದ ಹೋಟೆಲ್‌ನ ಕೊಠಡಿಗೆ ಅಕ್ರಮವಾಗಿ ಪ್ರವೇಶಿಸಿದ ಮೂವರು ಯುವತಿಯರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ.

`ಬ್ರಿಟನ್ ಮೂಲದ ಮೂವರು ಯುವತಿಯರನ್ನು ಬಂಧಿಸಲಾಗಿದೆ. ಇವರು ವಿಂಡೀಸ್ ಆಟಗಾರರು ಕೊಠಡಿಗೆ ಅಕ್ರಮವಾಗಿ ಪ್ರವೇಶಿಸಿದ್ದರು. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುವುದು~ ಎಂದು ಪೊಲೀಸ್ ವಕ್ತಾರ ಅಜಿತ್ ರೋಹಾನ ತಿಳಿಸಿದ್ದಾರೆ.

ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಆಡುತ್ತಿರುವ ವಿಂಡೀಸ್ ತಂಡದವರು ಸೆಮಿಫೈನಲ್ ಪ್ರವೇಶಿಸಿದ್ದಾರೆ. ಈ ತಂಡದವರು ಶುಕ್ರವಾರ ಆಸ್ಟ್ರೇಲಿಯಾ ವಿರುದ್ಧ ಪೈಪೋಟಿ ನಡೆಸಲಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT