ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಚಾರಣಾಧೀನ ಕೈದಿಗಳಿಗೆ ಜಾಮೀನು:ಸರ್ಕಾರದ ಮನವಿ

Last Updated 16 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಜೈಲುಗಳಲ್ಲಿ ಕೈದಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ವಿಚಾರಣಾಧೀನ ಆರೋಪಿಗಳು ಮತ್ತು ಕೈದಿಗಳಿಗೆ ಜಾಮೀನು ನೀಡುವಂತೆ ಕೇಂದ್ರ ಸರ್ಕಾರ ಎಲ್ಲ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಮನವಿ ಮಾಡಿದೆ.

ಜೈಲುಗಳಲ್ಲಿ ಕೈದಿಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮಾತ್ರ ಈ ಶಿಫಾರಸು ಮಾಡಲಾಗಿದ್ದು, ನ್ಯಾಯಾಂಗದಲ್ಲಿ ಹಸ್ತಕ್ಷೇಪ ಮಾಡುವ ಉದ್ದೇಶ ಇಲ್ಲ ಎಂದು ಸರ್ಕಾರ ತನ್ನ ಮನವಿಗೆ ಸಮಜಾಯಿಷಿ ನೀಡಿದೆ.

ಮಾಹಿತಿ ಹಕ್ಕು ಕಾಯ್ದೆ ಅಡಿ ಕಾರ್ಯಕರ್ತ ಸುಭಾಷ್ ಅಗರವಾಲ್ ಕೇಳಿದ ಮಾಹಿತಿಗೆ ಕೇಂದ್ರ ಕಾನೂನು ಸಚಿವಾಲಯ ಈ ವಿವರ ನೀಡಿದೆ. ಜಾಮೀನು ನೀಡುವುದು ಅಥವಾ ತಿರಸ್ಕರಿಸುವುದು ಅಂತಿಮವಾಗಿ ನ್ಯಾಯಾಲಯಗಳ ವಿವೇಚನೆಗೆ ಬಿಟ್ಟ ವಿಚಾರ ಎಂದೂ ಸಚಿವಾಲಯ ಸ್ಪಷ್ಟಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT