ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯ್ ಮೋರೆಗೆ ಮಸಿ: 15 ಜನ ಆರೋಪ ಮುಕ್ತ

Last Updated 3 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಬೆಳಗಾವಿ ಪಾಲಿಕೆಯ ಆಗಿನ ಮೇಯರ್ ವಿಜಯ್ ಮೋರೆ ಅವರ ಮುಖಕ್ಕೆ ಮಸಿ ಬಳಿದ ಪ್ರಕರಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಾಧ್ಯಕ್ಷ ಪ್ರವೀಣ್‌ಕುಮಾರ್ ಶೆಟ್ಟಿ ಸೇರಿದಂತೆ 15 ಸದಸ್ಯರನ್ನು ನಗರದ ಏಳನೇ ಎಸಿಎಂಎಂ ನ್ಯಾಯಾಲಯ ಶುಕ್ರವಾರ ಆರೋಪ ಮುಕ್ತಗೊಳಿಸಿದೆ.

2005ರ ನವೆಂಬರ್ 11ರಂದು ಶಾಸಕರ ಭವನದಲ್ಲಿ ಮೋರೆ ಮುಖಕ್ಕೆ ಮಸಿ ಬಳಿದಿದ್ದ ಆರೋಪದ ಮೇಲೆ ಪೊಲೀಸರು ಪ್ರವೀಣ್‌ಕುಮಾರ್ ಶೆಟ್ಟಿ ಸೇರಿ15 ಮಂದಿಯನ್ನು ಬಂಧಿಸಿದ್ದರು. ನಂತರ ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪಪಟ್ಟಿಯನ್ನೂ ಸಲ್ಲಿಸಿದ್ದರು. 6 ವರ್ಷಗಳ ಬಳಿಕ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಲಯ ಅವರೆಲ್ಲರನ್ನೂ ಆರೋಪಮುಕ್ತಗೊಳಿಸಿ ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT