ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜ್ಞಾನ ಆವಿಷ್ಕಾರದಿಂದ ಜೀವನ ಸ್ಥಿತಿ ಸುಧಾರಣೆ

Last Updated 11 ನವೆಂಬರ್ 2011, 19:30 IST
ಅಕ್ಷರ ಗಾತ್ರ

ರಾಮಗನರ: ವಿಜ್ಞಾನದ ಅದ್ಭುತ ಆವಿಷ್ಕಾರಗಳಿಂದ ಬಡವರ ಜೀವನ ಪರಿಸ್ಥಿತಿ ಹಿಂದಿಗಿಂತಲೂ ಇಂದು ಉತ್ತಮವಾಗಿದೆ ಎಂದು ಆದಿಚುಂಚನಗಿರಿ ಮಠದ  ನಿರ್ಮಲಾನಂದ ಸ್ವಾಮೀಜಿ ತಿಳಿಸಿದರು.

ಬಿಡದಿ ಹೋಬಳಿಯ ಬಾನಂದೂರು ಗ್ರಾಮದಲ್ಲಿ ವಿಷನ್ ಗ್ರೂಪ್ ಮತ್ತು ಬಿಜಿಎಸ್ ಶಿಕ್ಷಣ ಸಂಸ್ಥೆ ಜಂಟಿಯಾಗಿ ಆಯೋಜಿಸಿದ್ದ `ಅಂತರ್‌ರಾಷ್ಟ್ರೀಯ ರಸಾಯನಶಾಸ್ತ್ರ ವರ್ಷ-2011~ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 20ನೇ ಶತಮಾನದಲ್ಲಿ ಮನುಕುಲಕ್ಕೆ ಒಳಿತಾಗುವ ಅಸಂಖ್ಯಾತ ವೈಜ್ಞಾನಿಕ ಸಂಶೋಧನೆಗಳು ನಡೆದಿವೆ. ವಿಜ್ಞಾನಿಗಳ ಶ್ರಮದಿಂದಾಗಿ ಇಂದು ಕೋಟ್ಯಾಂತರ ಜನರಿಗೆ ಅನುಕೂಲವಾಗಿದೆ.

ವಿಜ್ಞಾನಿಗಳು ಸಂಶೋಧನೆಗೋಸ್ಕರವೇ ತಮ್ಮ ಜೀವನವನ್ನೇ ಬಲಿಕೊಟ್ಟಿದ್ದಾರೆ. ಮುಖ್ಯವಾಗಿ ಮೇಡಂ ಕ್ಯೂರಿ ಅವರು ರಸಾಯನಶಾಸ್ತ್ರದಲ್ಲಿ ಸಂಶೋಧನೆ ನಡೆಸಿ ಎರಡು ಬಾರಿ ನೊಬೆಲ್ ಪಾರಿತೋಷಕವನ್ನು ಪಡೆದರು. ಆದರೆ ಸಂಶೋಧನೆಗಾಗಿಯೇ ತಮ್ಮ ಜೀವವನ್ನೇ ತ್ಯಾಗ ಮಾಡಿದರು. ಮೇಡಂ ಕ್ಯೂರಿ ಅವರು ಎರಡನೇ ನೊಬೆಲ್ ಪ್ರಶಸ್ತಿ ಪಡೆದ 1911ರ ವರ್ಷದ ಹಿನ್ನೆಲೆಯಲ್ಲಿ 2011ರಲ್ಲಿ ರಸಾಯನ ಶಾಸ್ತ್ರದ ಶತಮಾನೋತ್ಸವ ವರ್ಷವನ್ನಾಗಿ ಆಚರಿಸಲಾಗುತ್ತಿದೆ ಎಂದರು.

ವಿಜ್ಞಾನ ಮತ್ತು ಆಧ್ಯಾತ್ಮ ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ಆಧ್ಯಾತ್ಮ ಮಾನಸಿಕ ನೆಮ್ಮದಿಯಿಂದ ಜೀವನವನ್ನು ಸಾಕ್ಷಾತ್ಕಾರಗೊಳಿಸಿಕೊಳ್ಳಲು ನೆರವಾಗುತ್ತದೆ.

ವಿಜ್ಞಾನವು ಭೌತಿಕ ಸಂಗತಿಗಳ ಪ್ರಾಯೋಗಿಕ ವಿಶ್ಲೇಷಣೆಗೆ ಪ್ರಯತ್ನಿಸುತ್ತದೆ. ವಿದ್ಯಾರ್ಥಿಗಳಿ ವಿಜ್ಞಾನದ ವಿಷಯಗಳಲ್ಲಿ ಉತ್ಸಾಹ ತುಂಬುವ ಸಲುವಾಗಿ ಪ್ರಯೋಗಗಳ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಕೆಎಲ್‌ಇ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಕೆ.ಎ.ಬುಲ್‌ಬುಲೆ ರಸಾಯನ ಶಾಸ್ತ್ರದ ಹಲವು ಪ್ರಾಯೋಗಿಕ ಪ್ರಾತ್ಯಕ್ಷಿಕೆಗಳನ್ನು ನಡೆಸಿಕೊಟ್ಟರು.

ಬಾನಂದೂರು ಶಾಖಾ ಮಠದ ಗುರುನಾಥ ಸ್ವಾಮೀಜಿ, ಡಾ.ಎನ್.ಶಿವರಾಮರೆಡ್ಡಿ, ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಮಧುಸೂದನ್, ಬಾನಂದೂರು ಶಾಲೆಯ ಮುಖ್ಯ ಶಿಕ್ಷಕ ಜಯರಾಂ ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT