ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜ್ಞಾನ ಕಾಂಗ್ರೆಸ್ ಶತಮಾನೋತ್ಸವ

Last Updated 10 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಭಾರತೀಯ ವಿಜ್ಞಾನ ಕಾಂಗ್ರೆಸ್‌ನ ಶತಮಾನೋತ್ಸವ ಕಾರ್ಯಕ್ರಮವು 2013ರ ಜನವರಿ 3ರಿಂದ 7ರವರೆಗೆ ಕೋಲ್ಕತ್ತದಲ್ಲಿ ನಡೆಯಲಿದ್ದು, ಪ್ರಧಾನಿ ಮನಮೋಹನ್ ಸಿಂಗ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ಭಾರತೀಯ ವಿಜ್ಞಾನ ಕಾಂಗ್ರೆಸ್‌ನ ಅಧ್ಯಕ್ಷರೂ ಆಗಿರುವ ಪ್ರಧಾನಿ, ಈ ಸಂದರ್ಭದಲ್ಲಿ ನೂತನ ವಿಜ್ಞಾನ ಮತ್ತು ತಂತ್ರಜ್ಞಾನ ಯೋಜನೆಗಳನ್ನು ಅನಾವರಣಗೊಳಿಸುವ ನಿರೀಕ್ಷೆ ಇದೆ.  ಈ ಅತ್ಯಂತ ದೊಡ್ಡ ರಾಷ್ಟ್ರೀಯ ವಿಜ್ಞಾನ ಕಾರ್ಯಕ್ರಮದ ಆತಿಥ್ಯವನ್ನು ಕೋಲ್ಕತ್ತ ವಿಶ್ವವಿದ್ಯಾನಿಲಯ ವಹಿಸಿಕೊಂಡಿದ್ದು,  ದೇಶ-ವಿದೇಶಗಳ ನೊಬೆಲ್ ಪುರಸ್ಕೃತ ವಿಜ್ಞಾನಿಗಳು ಮತ್ತು ಪ್ರಸಿದ್ಧ ವಿಜ್ಞಾನಿಗಳು ಸೇರಿದಂತೆ 10 ಸಾವಿರ ಪ್ರತಿನಿಧಿಗಳು ಭಾಗವಹಿಸುವ ಸಂಭವವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT