ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಟಿಯು ಕುಲಪತಿ ವಜಾಕ್ಕೆ ಒತ್ತಾಯ

Last Updated 14 ಫೆಬ್ರುವರಿ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) ಕುಲಪತಿ ಡಾ. ಮಹೇಶಪ್ಪ ಅವರು ಸುಳ್ಳು ಮಾಹಿತಿ ಸಲ್ಲಿಸಿ ಕುಲಪತಿಯಾಗಿದ್ದಾರೆ. ಹಾಗಾಗಿ ಅವರನ್ನು ಕೂಡಲೇ ವಜಾಗೊಳಿಸಬೇಕೆಂದು ಆಗ್ರಹಿಸಿ ನಗರದ ವಿಟಿಯು ಪ್ರಾದೇಶಿಕ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಸದಸ್ಯರನ್ನು ಪೊಲೀಸರು ಬಂಧಿಸಿ, ನಂತರ ಬಿಡುಗಡೆ ಮಾಡಿದರು.

ವಿ.ವಿ ಪರೀಕ್ಷಾ ಪರೀಕ್ಷಾ ಪದ್ಧತಿ ಸೇರಿದಂತೆ ಒಟ್ಟಾರೆ ವ್ಯವಸ್ಥೆಯ ಪಾವಿತ್ರ್ಯತೆಯನ್ನು ಸಂರಕ್ಷಿಸಬೇಕಾದ ಕುಲಪತಿಗಳೇ ಅಕ್ರಮದಲ್ಲಿ ತೊಡಗಿದ್ದಾರೆ. ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿರುವ ಮಹೇಶಪ್ಪ ಅವರು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ ಹೊಂದಿರುವ ಬಗ್ಗೆ ನಕಲಿ ಪ್ರಮಾಣ ಪತ್ರ ಸಲ್ಲಿಸಿ, ಕುಲಪತಿಯಾಗಿದ್ದಾರೆ. ಸರ್ಕಾರ ಈ ಬಗ್ಗೆ ಸೂಕ್ತ ನಡೆಸಬೇಕು ಎಂದು ಪ್ರತಿಭಟನಾನಿರತರು   ಒತ್ತಾಯಿಸಿದರು.

ಅಲ್ಲದೇ ಅವರು ಸಂಶೋಧನಾ ಸಮಿತಿಗೆ ಸಲ್ಲಿಸಿರುವ ಪರಿಚಯ ಪತ್ರದಲ್ಲಿ ಸಂಶೋಧನಾ ಪ್ರಬಂಧಗಳು, ಮಾರ್ಗದರ್ಶನ ಮಾಡಿದ ಪಿಎಚ್.ಡಿ ಗಳ ಬಗ್ಗೆಯೂ ತಪ್ಪು ಮಾಹಿತಿ ನೀಡಿದ್ದಾರೆ. ಇದರ ಬಗ್ಗೆ ಸಮಗ್ರ ತನಿಖೆ ನಡೆಸುವವರೆಗೂ ಅವರನ್ನು ವಜಾಗೊಳಿಸಬೇಕೆಂದು ಆಗ್ರಹಿಸಿದರು.

ವಿಟಿಯು ಅಡಿಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಮರು ಮೌಲ್ಯಮಾಪನಕ್ಕೆ ಎರಡು ಬಾರಿ ಅರ್ಜಿ ಸಲ್ಲಿಸಿದ್ದರೂ ಹೆಚ್ಚಿನ ಅಂಕಗಳನ್ನು ನೀಡಿರಲಿಲ್ಲ. ಆದರೆ ಸವಾಲು ಮರು ಮೌಲ್ಯಮಾಪನಕ್ಕೆ ಸಲ್ಲಿಸಿದಾಗ ಹೆಚ್ಚಿನ ಅಂಕಗಳನ್ನು ನೀಡಲಾಗಿದೆ. ಪರೀಕ್ಷಾ ಮೌಲ್ಯಮಾಪನದಲ್ಲಿ ಸಾಕಷ್ಟು ಅಕ್ರಮಗಳು ನಡೆದಿವೆ. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ತರ ವಿರುದ್ಧ ಸೂಕ್ರ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

 ಎಬಿವಿಪಿ ಬೆಂಗಳೂರು ದಕ್ಷಿಣ ವಲಯ ಕಾರ್ಯದರ್ಶಿ ದರ್ಶನ್ ದೇಸಾಯಿ, ದಕ್ಷಿಣ ವಲಯ ಸಂಚಾಲಕ ತೇಜಸ್ವಿಸೂರ್ಯ, ನಗರ ಸಹ ಕಾರ್ಯದರ್ಶಿ ಗಗನ್, ಅಭಿಲಾಷ್, ಕೇಂದ್ರ ವಲಯ ಕಾರ್ಯದರ್ಶಿ ಪ್ರೇಮ್ ಮತ್ತಿತರರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT